ರಾಯ್ಪುರ್: ಅಸಹಜ ಲೈಂಗಿಕ ಕ್ರಿಯೆಯನ್ನು ನಿರಾಕರಿಸಿದ್ದಕ್ಕೆ 20 ವರ್ಷದ ಯುವಕನೊಬ್ಬ ಅಪ್ರಾಪ್ತ ಬಾಲಕನಿಗೆ ಚಾಕು ಇರಿದು ಕೊಲೆ ಮಾಡಿರುವ ಆತಂಕಕಾರಿ ಘಟನೆ ಛತ್ತೀಸ್ಗಢದ ಬೆಮೆತರಾ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಯನ್ನು ಪಂಕಜ್ ವಿಶ್ವಕರ್ಮ ಎಂದು ಗುರುತಿಸಲಾಗಿದೆ. ಸೋಮವಾರ ಬಿಜಭತ ಮುರುಮ್ ಬಳಿಯಿರುವ ನಿರ್ಜನ ಪ್ರದೇಶದ ಬಳಿ ಕರೆದೊಯ್ದು ಹರಿತವಾದ ಚಾಕುವಿನಿಂದ ಬಾಲಕನನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ಬಚ್ಚಿಟ್ಟು ಪರಿಯಾಗಿದ್ದ ಎಂದು ಬೆಮೆತರಾ ಪೊಲೀಸ್ ಠಾಣೆಯ ಅಧಿಕಾರಿ ಪ್ರೇಮ್ ಪ್ರಕಾಶ್ ಅವಧಿಯಾ ಮಂಗಳವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಗ ಮನೆಗೆ ಬರದಿದ್ದನ್ನು ನೋಡಿ ಮೃತ ಬಾಲಕನ ಪಾಲಕರು ನಾಪತ್ತೆ ದೂರನ್ನು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದಾಗ ನಿರ್ಜನ ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿರುವುದು ಪೊಲೀಸರಿಗೆ ಗೊತ್ತಾಗಿದೆ. ಹೋಗಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪರಾರಿಯಾಗಿರುವ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. (ಏಜೆನ್ಸೀಸ್)