ಬೆಂಗಳೂರು: ಸರ್ವರ ವಿಕಾಸ, ಸಮೃದ್ಧ ಕರ್ನಾಟಕದತ್ತ! ದೃಢ ಹೆಜ್ಜೆಗಳು ಎಂಬ ಧ್ಯೇಯದಡಿ ಬಿಜೆಪಿಯು ದೊಡ್ಡಬಳ್ಳಾಪುರದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ʻಜನಸ್ಪಂದನʼ ಸಮಾವೇಶ ನಡೆಸುತ್ತಿದೆ. ಇದನ್ನು ವ್ಯಂಗ್ಯವಾಡಿರುವ ಕಾಂಗ್ರೆಸ್ ಕರ್ನಾಟಕ ಜನತೆಗೆ ಬಿಜೆಪಿಯು ಏನು ಮಾಡಿದೆ ಎಂದು ಪ್ರಶ್ನಿಸಿದೆ.
ರಾಜ್ಯದ ಜನತೆಗೆ ಯಾವ ಸಾಧನೆ, ಯೋಜನೆ, ಸ್ಪಂದನೆ ಮಾಡಿದ್ದರೆಂದು ಸರ್ಕಾರ ಸಮಾವೇಶ ಮಾಡುತ್ತಿದೆ? ಬಿಜೆಪಿ ಸರ್ಕಾರ ಕರ್ನಾಟಕದ ಜನತೆಗೆ, ಕನ್ನಡ ನಾಡುನುಡಿಗೆ ಮಾಡಿದ್ದು ಬಿಟ್ಟರೆ ಬೇರೇನು ಮಾಡಿದೆ? ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ನಾಡಿನ ಸಾಹಿತಿಗಳಿಗೆ ಅವಮಾನಿಸಿದ್ದೇ ನಿಮ್ಮ ಸಾಧನೆಯೇ ಬಸವರಾಜ ಬೊಮ್ಮಾಯಿ ಅವರೇ? ಎಂದು ಪ್ರಶ್ನಿಸಿದೆ.