ನ್ಯೂಸ್

ಎಸ್​.ಎಂ. ಕೃಷ್ಣ ನೇತೃತ್ವದ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ

ಹುಬ್ಬಳ್ಳಿ: ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಶುಕ್ರವಾರ (ಅ.07) ವಿಧಿವಶರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

ಹೊನ್ನಾಳಿ ಅವರು ಎಸ್​.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್​ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದರು. ಮೃತರ ಸಾವಿಗೆ ಅನೇಕ ರಾಜಕೀಯ ಮುಖಂಡರು ಹಾಗೂ ಬಂಧು ಬಳಗದವರು ಕಂಬನಿ ಮಿಡಿದಿದ್ದಾರೆ. (ದಿಗ್ವಿಜಯ ನ್ಯೂಸ್​)