ನ್ಯೂಸ್

ಸಹೋದ್ಯೋಗಿ ಮಹಿಳೆಯೊಂದಿಗೆ ರೆಸಾರ್ಟ್​ನಲ್ಲಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಎಸ್​ಐ!

ಹೈದರಾಬಾದ್​: ಸಹೋದ್ಯೋಗಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿ ಸಿಕ್ಕಿಬಿದ್ದಿದ್ದ ಹೈದರಾಬಾದ್​ನ ಜವಹರ್​ ನಗರ ಠಾಣೆಯ ಸಬ್​ ಇನ್ಸ್​ಪೆಕ್ಟರ್​ನನ್ನು ರಾಚಕೊಂಡ ಪೊಲೀಸ್​ ಆಯುಕ್ತ ಮಹೇಶ್​ ಭಾಗವತ್​ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಎಸ್​ಐ ಅನಿಲ್​ ತಮ್ಮದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ತುಂಬಾ ದಿನಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು. ಈ ಸಂಬಂಧ ದೂರು ಸಹ ದಾಖಲಾಗಿತ್ತು.

ಇದರ ನಡುವೆ ತಿಮ್ಮೈಪಲ್ಲಿಯಲ್ಲಿರುವ ಸೈಲೆಂಟ್​ ವಾಲ್ಟ್​ ರೆಸಾರ್ಟ್​ನಲ್ಲಿ ಅನಿಲ್​ ಮತ್ತು ಮಹಿಳೆ ಇಬ್ಬರು ಸೇರಿರುವುದಾಗಿ ಕೀಸರ ಠಾಣೆಗೆ ಪೊಲೀಸರಿಗೆ ಮಾಹಿತಿ ಬಂದಿತ್ತು.

ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದಾಗ ಎಸ್​ಐ ಅನಿಲ್​ ಮತ್ತು ಮಹಿಳೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರು. ಇಬ್ಬರನ್ನು ವಶಕ್ಕೆ ಪಡೆದಿದ್ದು, ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರಿಂದ ಅನಿಲ್​ರನ್ನು ಪೊಲೀಸ್​ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. (ಏಜೆನ್ಸೀಸ್​)