ಹೈದರಾಬಾದ್: ಸಾಲು ಸಾಲು ಚಿತ್ರಗಳಲ್ಲಿ ಬಿಜಿಯಾಗಿರುವ ಹಾಟ್ ಬ್ಯೂಟಿ ಪೂಜಾ ಹೆಗ್ಡೆ ಸಿನಿಮಾದಿಂದ ಕೊಂಚ ಬಿಡುವು ಪಡೆದುಕೊಂಡಿದ್ದು ಸದ್ಯ ಪ್ರವಾಸಿಗರ ಸ್ವರ್ಗ ಮಾಲ್ಡೀವ್ಸ್ನಲ್ಲಿ ಬೀಡು ಬಿಟ್ಟಿದ್ದು, ಕಡಲ ಕಿನಾರೆಯಲ್ಲಿ ಮಿಂದೇಳುತ್ತಿದ್ದಾರೆ.
ಮಾಲ್ಡೀವ್ಸ್ ಪ್ರವಾಸದ ಪ್ರತಿಯೊಂದು ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣ ಖಾತೆಯಲ್ಲಿ ನಟಿ ಪೂಜಾ ಹೆಗ್ಡೆ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಪೂಜಾ ಅವರ ಬಿಕಿನಿ ಫೋಟೋಗಳು ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದೆ.
ಸ್ವಿಮ್ಮಿಂಗ್ ಫೂಲ್ ಒಳಗೆ ಬ್ರೇಕ್ಫಾಸ್ಟ್ ಮಾಡುತ್ತಿರುವ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲದೆ, ಬಿಕಿನಿಯಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋವಂತೂ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ.
ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ, ಇಳಯದಳಪತಿ ವಿಜಯ್ ಅಭಿನಯದ ಬೀಸ್ಟ್ ಚಿತ್ರದಲ್ಲಿ ಒಂದು ಹಂತದ ಚಿತ್ರೀಕರಣ ಮುಗಿಸಿದ ಬೆನ್ನಲ್ಲೇ ಪೂಜಾ ಮಾಲ್ಡೀವ್ಸ್ಗೆ ಹಾರಿದ್ದಾರೆ. ಮಹೇಶ್ ಬಾಬು ಅಭಿನಯದ ಹೊಸ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ. ಆಚಾರ್ಯ ಮತ್ತು ರಾಧೆಶ್ಯಾಮ್ ಚಿತ್ರ ಪೂರ್ಣಗೊಂಡಿದ್ದು ಬಿಡುಗಡೆಗೆ ಸಿದ್ಧವಾಗಿವೆ. 2022 ಫೆಬ್ರವರಿ 4ಕ್ಕೆ ಆಚಾರ್ಯ ಮತ್ತು 2022 ಜನವರಿ 14ಕ್ಕೆ ರಾಧೆಶ್ಯಾಮ್ ಬಿಡುಗಡೆಯಾಗಲಿದೆ. (ಏಜೆನ್ಸೀಸ್)