ಪುಣೆ: ಚಾಕೊಲೇಟ್ ಖರೀದಿಸಿಲು ಹಣ ಕೊಡುವ ಭರವಸೆ ನೀಡಿ ನಾಲ್ಕು ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಬಾಲಕಿ ವಾಸವಿದ್ದ ಮನೆಯ ಪಕ್ಕದಲ್ಲೇ ಇದ್ದ ಬಾಲಕನಿಂದ ಈ ಕೃತ್ಯ ನಡೆದಿದೆ. ಮನೆಯಿಂದ ಆಟವಾಡಲು ಬಂದ ಬಾಲಕಿಗೆ ಚಾಕೊಲೇಟ್ ಆಸೆವೊಡ್ಡಿ ಬಾಲಕ ದುರ್ಬಳಕೆ ಮಾಡಿಕೊಂಡಿದ್ದಾನೆ.
ಈ ಘಟನೆ ಕಳೆದ ವಾರವೇ ನಡೆದಿದ್ದು, ಈ ಸಂಬಂಧ ಶನಿವಾರ ಪುಣೆಯ ಪಿಂಪ್ರಿ ಚಿಂಚವಾಡ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಮತ್ತು ಪೊಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ಬಾಲಕ ತನ್ನ ಮನೆಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾನೆಂದು ಬಾಲಕಿಯ ಪಾಲಕರು ಆರೋಪಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. (ಏಜೆನ್ಸೀಸ್)