ಬೆಂಗಳೂರು: ಸ್ಯಾಂಡಲ್ವುಡ್ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ತಮ್ಮ ಅಭಿನಯ ಹಾಗೂ ವಿಭಿನ್ನ ಮ್ಯಾನರಿಸಂ ಮೂಲಕ ಕನ್ನಡ ಮಾತ್ರವಲ್ಲೇ ಪರಭಾಷೆಗಳಲ್ಲೂ ಡಿಮ್ಯಾಂಡ್ ಹೆಚ್ಚಿಸಿಕೊಂಡಿದ್ದಾರೆ. ಸದಾ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್ ಆಗಿರುವ ರಚ್ಚು ಸದಾ ಜನರ ಸೆಳೆಯುತ್ತಿರುತ್ತಾರೆ. ಇದೀಗ ಒಂದು ಪೋಸ್ಟ್ ಮೂಲಕ ಅಭಿಮಾನಿಗಳ ತಲೆ ಕೆಡಿಸಿರುವ ರಚ್ಚು ಎಲ್ಲರ ಗಮನ ಸೆಳೆಯುತ್ತಿದ್ದಾರೆ.
ಮುಖವಾಡ ಹಾಕಿದ ಫೇಕ್ ಜನರು ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ ಎಂದು ಪೋಸ್ಟ್ ಮಾಡಿದ್ದಾರೆ. ರಚಿತಾ ರಾಮ್ ಅವರು ಮಾಡಿರೋ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದ್ದು, ಅವರು ಹೀಗೆ ಹೇಳಿದ್ದು ಏಕೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ| ಈ ಬಗ್ಗೆ ಅಭಿಮಾನಿಗಳು ಕಮೆಂಟ್ ಮಾಡಿ ಏಕೆ ಎಂದು ಪ್ರಶ್ನಿಸುತ್ತಿದ್ದಾರೆ.
ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಳ್ಳುವ ಮೊದಲು ಪರಪ್ಪನ ಅಗ್ರಹಾರದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ ಭಾವುಕರಾಗಿದ್ದರು. ಅನೇಕರು ಈ ವಿಚಾರವನ್ನು ಮುಂದಿಟ್ಟುಕೊಂಡು ಟ್ರೋಲ್ ಮಾಡಿದ್ದರು. ಈ ವಿಚಾರವಾಗಿ ಅವರು ಈ ಪೋಸ್ಟ್ ಮಾಡಿದ್ದಾರೆ ಎಂದು ಹೇಳಲಾಗಿದೆ.
ಸಂಜು ವೆಡ್ಸ್ ಗೀತಾ-2 ಚಿತ್ರದ ಶೂಟಿಂಗ್ ಮುಗಿಸಿರುವ ರಚಿತಾ ರಾಮ್ ಸಚಿವ ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾದ ಮುಹೂರ್ತ ನಡೆದಿದೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು.