ಬೆಳಗಾವಿ: ಕಾಂಗ್ರೆಸ್ ಪಕ್ಷ ಯುವ ಸಭಲೀಕರಣಕ್ಕೆ ಮಹತ್ವದ ಯುವನಿಧಿ ಯೋಜನೆಯನ್ನು ಘೋಷಿಸಿದ್ದು, 2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3000 ರೂ. ಆರ್ಥಿಕ ನೆರವು ಘೋಷಿಸಿದೆ. ಅಲ್ಲದೆ ನಿರುದ್ಯೋಗಿ ಡಿಪ್ಲೊಮಾ ಪಧವೀಧರರಿಗೆ 1500 ರೂ. ನಿರುದ್ಯೋಗ ಭತ್ಯೆ ಘೋಷಿಸಿದೆ.
ಇದನ್ನೂ ಓದಿ: ಬಾವಿಯಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ಬಯಲಾಯ್ತು ಬಾಲಕಿಯ ಚಿಮ್ಮಕ್ಕನ ಕಿರಾತಕ ಕೃತ್ಯ!
ಬೆಳಗಾವಿಯಲ್ಲಿ ನಡೆಯುತ್ತಿರುವ "ಯುವಕ್ರಾಂತಿ" ಸಮಾವೇಶದಲ್ಲಿ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಕಾರ್ಡ್ ಅನ್ನು ಬಿಡುಗಡೆ ಮಾಡಿದರು.
ಈಗಾಗಲೇ ಕಾಂಗ್ರೆಸ್ ಮೂರು ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್ ವಿದ್ಯುತ್ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡಲಾಗುವುದು ಎಂದು ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿದೆ.