ಹರಿಯಾಣ: ಹಾಥರಸ್ ಪ್ರಕರಣ ಹಿನ್ನೆಲೆಯಲ್ಲಿ ಶನಿವಾರ ಉತ್ತರಪ್ರದೇಶಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾನುವಾರ ಪಂಜಾಬ್ ಪ್ರವಾಸದಲ್ಲಿದ್ದಾರೆ. ಈ ನಡುವೆ ಅವರು, ಕೇಂದ್ರ ಸರ್ಕಾರ ತಂದ ತಿದ್ದುಪಡಿ ಕಾಯ್ದೆಗಳ ವಿರುದ್ಧ ಧ್ವನಿ ಎತ್ತಿದ್ದು, ಹಲವೆಡೆಗೆ ತೆರಳಿ ಆ ಕುರಿತು ಪ್ರಸ್ತಾಪಿಸುತ್ತಿದ್ದಾರೆ.
ಪಂಜಾಬ್ ಬಳಿಕ ರಾಹುಲ್ ಹರಿಯಾಣಕ್ಕೆ ತೆರಳಿ, ತಿದ್ದುಪಡಿ ಕಾಯ್ದೆಗಳ ಬಗ್ಗೆ ಮಾತನಾಡಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದೀಗ ಆ ಕುರಿತು ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿಗೆ ಬೇರೆ ಏನೂ ಕೆಲಸ ಇಲ್ಲ, ಅದಕ್ಕೆ ಬೇರೆ ಬೇರೆ ಸ್ಥಳಗಳಿಗೆ ಹೋಗಿ ಆ ಕೆಲಸ ಮಾಡುತ್ತಿದ್ದಾರೆ. ಅವರ ಭೇಟಿ ಬಗ್ಗೆ ನಮಗೆ ಯಾವುದೇ ಮಾಹಿತಿ ಬಂದಿಲ್ಲ. ಯಾವುದೇ ಸಂದರ್ಭದಲ್ಲೂ ನಾವು ಕಾನೂನು ಸುವ್ಯವಸ್ಥೆ ಹದಗೆಡಿಸಲು ಬಿಡುವುದಿಲ್ಲ ಎಂಬುದಾಗಿ ಖಟ್ಟರ್ ಖಡಕ್ ಆಗಿ ಹೇಳಿದ್ದಾರೆ. (ಏಜೆನ್ಸೀಸ್)