ನ್ಯೂಸ್

ಬಿಜೆಪಿ ವಿರುದ್ಧ 40% ಕಮಿಷನ್​ ಆರೋಪ; ರಾಹುಲ್​ ಗಾಂಧಿಗೆ ಷರತ್ತುಬದ್ದ ಜಾಮೀನು ಮಂಜೂರು

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಬಿಜೆಪಿ ಕೇಸಿನ ಹಿನ್ನೆಲೆ ಇಂದು ರಾಹುಲ್​ ಗಾಂಧಿ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್​ ಪರ ವಕೀಲರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಜೂನ್​ 30ಕ್ಕೆ ಮುಂದೂಡಿದರು. ರಾಹುಲ್ ಗಾಂಧಿಗೆ ಮಾಜಿ ಸಂಸದ ಡಿ‌.ಕೆ ಸುರೇಶ್ ಬಾಂಡ್ ಶ್ಯೂರಿಟಿ ನೀಡಿದ್ದಾರೆ. ರಾಹುಲ್​ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನ್ಯಾಯಾಲಯದಲ್ಲಿ ಹಾಜರಿದ್ದರು.