ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಗುರುವಾರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏನು ಮಾತನಾಡಿದ್ದಾರೆ ಎಂಬುದು ತಿಳಿದಿಲ್ಲವಾದರೂ, ಇದು ಈ ವರ್ಷದ ಕೊನೆಯಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ಹಲವು ಮಹತ್ವದ ವಿಷಯಗಳು ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನವೆಂಬರ್ 5ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಅಧ್ಯಕ್ಷ ಜೋ ಬಿಡೆನ್ ಅವರು ಸ್ಪರ್ಧಿಸಬೇಕೇ ಎಂಬ ಪ್ರಶ್ನೆಗಳು ಎದ್ದಿವೆ. ಇನ್ನು ಭಾರತೀಯ ಮತ್ತು ಆಫ್ರಿಕನ್ ಮೂಲದ ಕಮಲಾ ಹ್ಯಾರಿಸ್ ಅವರು ಡೊನಾಲ್ಡ್ ಟ್ರಂಪ್‌ಗೆ ಸವಾಲಾಗಬಹುದು ಎಂಬ ಚರ್ಚೆ ಡೆಮಾಕ್ರಟಿಕ್ ಪಕ್ಷದ ವಲಯಗಳಲ್ಲಿ ನಡೆದಿದೆ.
ಇದನ್ನು ಜೋ ಬಿಡೆನ್ ಅವರು ತಳ್ಳಿಹಾಕಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಟ್ರಂಪ್ ಅವರನ್ನು ಸೋಲಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.