ನ್ಯೂಸ್

ಸೋನಿಯಾ-ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ತೊಂದರೆ, ತುರ್ತು ಭೂಸ್ಪರ್ಶ!

ಭೋಪಾಲ್: ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಯುಪಿಎ ಅಂಗಪಕ್ಷಗಳ ನಾಯಕರ ಸಭೆಯಲ್ಲಿ ಪಾಲ್ಗೊಂಡು ಮರಳುತ್ತಿದ್ದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿದ್ದ ವಿಮಾನ ತೊಂದರೆಗೆ ಸಿಲುಕಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ.

ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರಿದ್ದ ವಿಮಾನ ಮಧ್ಯಪ್ರದೇಶದ ಭೋಪಾಲ್​​ನ ರಾಜಾ ಭೋಜ್ ವಿಮಾನನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಇವರಿದ್ದ ವಿಮಾನ ಭೋಪಾಲ್ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಿದೆ ಎಂದು ಅಲ್ಲಿನ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಭಾರಿ ಮಳೆ ಹಾಗೂ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎನ್ನಲಾಗಿದೆ.