ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೆ.8 ರಿಂದ 10 ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಸಾಗರೋತ್ತರ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.
ಇದನ್ನೂ ಓದಿ: ಅಮ್ಮನ ಕನಸು ನನಸಾಯಿತು, ಖುಷಿಯಾಗಿದ್ದೇನೆ.. ಕನ್ನಡ ನೆಲದಲ್ಲಿ ಎನ್ಟಿಆರ್ ಹೀಗೆನ್ನಲು ಇದೇ ಕಾರಣ ನೋಡಿ..
ರಾಹುಲ್ ಸೆ8 ರಂದು ಡಲ್ಲಾಸ್ ಮತ್ತು ಸೆ. 9 ಹಾಗೂ 10 ರಂದು ವಾಷಿಂಗ್ಟನ್ ಡಿಸಿಗೆ ಭೇಟಿ ನೀಡಲಿದ್ದಾರೆ ಎಂದು ಅವರು ಎಕ್ಸ್ನಲ್ಲಿ ತಿಳಿಸಿದ್ದಾರೆ.
ಕಳೆದ ವರ್ಷ ಮೇ ತಿಂಗಳಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಿಂದ ಮೂರು ದಿನಗಳ ಅಮೆರಿಕ ಪ್ರವಾಸವನ್ನು ರಾಹುಲ್ ಆರಂಭಿಸಿದ್ದರು. ಆಗ ಅವರು ಅನಿವಾಸಿ ಭಾರತೀಯರನ್ನು ಭೇಟಿಯಾಗಿದ್ದರು. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಹಲವಾರು ಕಾರ್ಯಕರ್ತರು, ಶಿಕ್ಷಣ ತಜ್ಞರು ಮತ್ತು ನಾಗರಿಕರ ಚರ್ಚೆ ನಡೆಸಿದ್ದರು.
ರಾಹುಲ್ ಗಾಂಧಿ ಅಲ್ಪಾವಧಿಯಲ್ಲಿ ಅಮೆರಿಕ ಪ್ರವಾಸದ ಕೈಗೊಂಡಿದ್ದಾರೆ. ಅವರು ಈ ಸಂದರ್ಭದಲ್ಲಿ ಟೆಕ್ಸಾಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಮತ್ತು ಸಮುದಾಯದ ಜನರೊಂದಿಗೆ ಸಂವಾದ ನಡೆಸಲಿದ್ದಾರೆ. ವಿವಿಧ ಕ್ಷೇತ್ರದ ತಂತ್ರಜ್ಞರನ್ನು ಭೇಟಿ ಮಾಡಲಿದ್ದಾರೆ. ಡಲ್ಲಾಸ್ ಮುಖಂಡರೊಂದಿಗೆ ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ಯಾಮ್ ಪಿತ್ರೋಡಾ ವಿವರಿಸಿದ್ದಾರೆ.
ಮರುದಿನ ಅವರು ವಾಷಿಂಗ್ಟನ್ ಡಿಸಿಯ ನ್ಯಾಷನಲ್ ಪ್ರೆಸ್ ಕ್ಲಬ್ ಸೇರಿದಂತೆ ಹಲವರನ್ನು ಭೇಟಿಯಾಗಲಿದ್ದು, ರಾಹುಲ್ ಅವರ ಅಮೆರಿಕ ಭೇಟಿಯನ್ನು ಯಶಸ್ವಿಗೊಳಿಸಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.