ನವದೆಹಲಿ: 18ನೇ ಲೋಕಸಭೆ ಅಧಿವೇಶನ ಆರಂಭವಾಗಿದೆ. ಅಧಿವೇಶನದಲ್ಲಿ ವಿಪಕ್ಷ ನಾಯಕ ರಾಹುಲ್ಗಾಂಧಿ ಮೊದಲ ಬಾರಿಗೆ ಭಾಷಣ ಮಾಡಿದರು. ವಿರೋಧ ಪಕ್ಷದ ನಾಯಕರಾಗಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ರಾಹುಲ್ ಗಾಂಧಿ ಭಾಷಣದ ವೇಳೆ ಬಿಜೆಪಿಯ ಉನ್ನತ ನಾಯಕರು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರೀ ವಿರೋಧ ವ್ಯಕ್ತವಾದ ಬಳಿಕ ರಾಹುಲ್ ಗಾಂಧಿ ಅವರ ಭಾಷಣದ ಕೆಲವು ಭಾಗಗಳನ್ನು ಲೋಕಸಭೆಯ ಸ್ಪೀಕರ್ ತೆಗೆದುಹಾಕಿದ್ದಾರೆ.
ಲೋಕಸಭೆಯಲ್ಲಿ ಸ್ಪೀಕರ್ ತಮ್ಮ ಭಾಷಣದ ಪ್ರಮುಖ ಭಾಗಗಳನ್ನು ತೆಗೆದುಹಾಕಿದ ನಂತರ ಪ್ರಧಾನಿ ಮೋದಿ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ ಜಗತ್ತಿನಲ್ಲಿ ಸತ್ಯವನ್ನು ಅಳಿಸಬಹುದು, ಆದರೆ ವಾಸ್ತವದಲ್ಲಿ ಸತ್ಯವನ್ನು ತೆಗೆದುಹಾಕಲು ಸಾಧ್ಯವಿಲ್ಲ. ನಾನು ಏನು ಹೇಳಬೇಕು ಅದನ್ನು ಹೇಳಿದ್ದೇನೆ, ಇದು ಸತ್ಯ. ಅವರು ತೆಗೆದುಹಾಕಿದರು ಸತ್ಯವು ಮೇಲುಗೈ ಸಾಧಿಸುತ್ತದೆ ಎಂದು ಹೇಳಿದ್ದಾರೆ.
ಸದನದಲ್ಲಿ ರಾಹುಲ್ಗಾಂಧಿ ಅವರು ನೀಟ್, ಅಗ್ನಿವೀರ್ ಸೇರಿದಂತೆ ಹಲವು ವಿಷಯಗಳನ್ನು ತಮ್ಮ ಭಾಷಣದಲ್ಲಿ ಸೇರಿಸಿಕೊಂಡಿದ್ದರು. ಅದರಲ್ಲಿ ಹಿಂದುತ್ವದ ಬಗ್ಗೆ ನೀಡಿದ ಹೇಳಿಕೆಗೆ ಪ್ರಧಾನಿ ಮೋದಿ ಸೇರಿದಂತೆ ಆಡಳಿತ ಪಕ್ಷದ ಹಲವರು ಆಕ್ಷೇಪ ವ್ಯಕ್ತಪಡಿಸಿದರು. ಹಿಂದೂ ಎಂದು ಕರೆದುಕೊಳ್ಳುವವರು ಹಿಂಸಾಚಾರದಲ್ಲಿ ತೊಡಗುತ್ತಾರೆ ಎಂಬ ರಾಹುಲ್ ಗಾಂಧಿ ಅವರು ಹೇಳುತ್ತಿದ್ದಾರೆ ಅವರ ಭಾಷಣವನ್ನು ಪ್ರಧಾನಿ ಮೋದಿ ಅಡ್ಡಿಪಡಿಸಿ ಇಡೀ ಹಿಂದೂ ಸಮುದಾಯವನ್ನು ಹಿಂಸಾಚಾರದೊಂದಿಗೆ ಜೋಡಿಸುವುದು ಸರಿಯಲ್ಲ. ಇದು ತುಂಬಾ ಗಂಭೀರವಾದ ವಿಚಾರ ಎಂದು ಹೇಳಿದರು.
ಹಿಂದೂಗಳು, ಅಗ್ನಿವೀರ, ಅಲ್ಪಸಂಖ್ಯಾತರು ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಹುಲ್ಗಾಂಧಿ ಅವರು ತಮ್ಮ ಭಾಷಣದಲ್ಲಿ ನೀಡಲಾದ ಹೇಳಿಕೆಗಳನ್ನು ತೆಗೆದುಹಾಕಲಾಗಿದೆ ಎನ್ನಲಾಗಿದೆ. (ಏಜೆನ್ಸೀಸ್)