ನವದೆಹಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅತ್ಯಾಚಾರ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ಪಕ್ಷವು ಕಣ್ಣುಮುಚ್ಚಿ ಕುಳಿತಿದೆ ಎಂದು ಲೋಕಸಭೆ ವಿರೋಧ ಪಕ್ಷ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ತರಬೇತಿ ಪಡೆಯುತ್ತಿರುವ ಸೇನಾ ಮಹಿಳೆಯ ಮೇಲೆ ನಡೆದ ಅತ್ಯಾಚಾರವನ್ನು ಉಲ್ಲೇಖಿಸಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ತರಬೇತಿ ಸೇನಾ ಅಧಿಕಾರಿಗಳ ಮೇಲೆ ದಾಳಿ ಮತ್ತು ಅವರ ಗೆಳತಿಯ ಅತ್ಯಾಚಾರ ನಡೆದಿರುವುದು ಸಮಾಜಕ್ಕೆ ನಾಚಿಕೆ ತಂದಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಬಿಜೆಪಿಯ ನಕಾರಾತ್ಮಕ ಧೋರಣೆ ಕಳವಳಕಾರಿಯಾಗಿದೆ. ಇದಕ್ಕೆ ಆಡಳಿತ ವೈಫಲ್ಯವೇ ಕಾರಣ. ಕ್ರಿಮಿನಲ್‌ಗಳು ಇಂತಹ ಕೃತ್ಯಗಳನ್ನು ಎಸಗುತ್ತಿದ್ದರೂ, ಜನಸಂಖ್ಯೆಯ ಅರ್ಧದಷ್ಟು ಇರುವ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ, ಎಷ್ಟು ದಿನ ಕಣ್ಣು ಮುಚ್ಚಿಕೊಳ್ಳುತ್ತೀರಿ ಎಂದು ರಾಹುಲ್ ಪ್ರಶ್ನಿಸಿದ್ದಾರೆ.