ನ್ಯೂಸ್

ಎನ್‌ಐಎಗೆ ರಾಹುಲ್‌ಕುಮಾರ್ ಶಹಪುರ್‌ವಾದ್ ವರ್ಗಾವಣೆ

ಬೆಂಗಳೂರು: ಬೆಂಗಳೂರು ನಗರ ದಕ್ಷಿಣ ವಿಭಾಗ ಡಿಸಿಪಿ ರಾಹುಲ್ ಕುಮಾರ್ ಶಹಪುರ್‌ವಾದ್ ಅವರನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವರ್ಗಾವಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.

ಮಹಾರಾಷ್ಟ್ರ ಮೂಲದ ರಾಹುಲ್‌ಕುಮಾರ್, 2012ನೇ ಸಾಲಿನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದಾರೆ.

ರಾಜ್ಯ ವಿವಿಧೆಡೆ ಸೇವೆ ಸಲ್ಲಿಸುತ್ತಿರುವ ರಾಹುಲ್‌ಕುಮಾರ್, ಎನ್‌ಐಎಗೆ ಐದು ವರ್ಷಗಳ ಸೇವಾವಧಿಗೆ ವರ್ಗಾವಣೆ ಆಗಿದ್ದಾರೆ. ಮುಂದಿನ ಆದೇಶದವರೆಗೂ ಎನ್‌ಐಎನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.