ನ್ಯೂಸ್

ರಾಹುಲ್​ ಗಾಂಧಿ ಯಾವಾಗಲೂ ಚೀನಾವನ್ನು ಪ್ರಚಾರ ಮಾಡ್ತಾರೆ; ಸಿಎಂ ಹಿಮಂತ ಬಿಸ್ವಾ ಶರ್ಮಾ ಹೀಗೆಳಿದ್ದೇಕೆ?

ದಿಸ್ಪೂರ್​​: ಅಮೆರಿಕದ ಡಲ್ಲಾಸ್‌ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಕಾಂಗ್ರೆಸ್​​ ನಾಯಕ ರಾಹುಲ್​ಗಾಂಧಿ ನೀಡಿದ ಹೇಳಿಕೆಯನ್ನು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸೋಮವಾರ (ಸೆಪ್ಟೆಂಬರ್​​ 9) ಖಂಡಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್​ಗಾಂಧಿ ಚೀನಾವನ್ನು ವಿವಿಧ ರೀತಿಯಲ್ಲಿ ಪ್ರಚಾರ ಮಾಡುತ್ತಾರೆ. ಭಾರತವನ್ನು ದುರ್ಬಲಗೊಳಿಸಿ ಚೀನಾವನ್ನು ಅತ್ಯುತ್ತಮ ರಾಷ್ಟ್ರವೆಂದು ಬಿಂಬಿಸಲು ಪ್ರಯತ್ನಿಸುತ್ತಾರೆ. ಆದರೆ ಚೀನಾದಲ್ಲಿ ಪ್ರಜಾಪ್ರಭುತ್ವವಿಲ್ಲ ಮತ್ತು ಜನರಿಗೆ ಧಾರ್ಮಿಕ ಸ್ವಾತಂತ್ರ್ಯವಿಲ್ಲ. ಅದರ ಬಗ್ಗೆ ಏಕೆ ಮಾತನಾಡುವುದಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ನಡುವೆ ಸಹಿ ಹಾಕಿರುವ ತಿಳಿವಳಿಕೆ ಒಪ್ಪಂದವನ್ನು ಬಹಿರಂಗಪಡಿಸಬೇಕು ಎಂದು ಹೇಳಿದರು.

ರಾಹುಲ್​ ಗಾಂಧಿ ಹೇಳಿಕೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ವಿದೇಶಗಳಲ್ಲಿ ಭಾರತದ ಇಮೇಜ್ ಅನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜಾರ್ಜ್ ಬುಷ್, ಡೊನಾಲ್ಡ್ ಟ್ರಂಪ್, ಬಿಲ್ ಕ್ಲಿಂಟನ್ ಮತ್ತು ಬಿಡೆನ್ ಬೇರೆ ದೇಶಕ್ಕೆ ಹೋದಾಗ ಅಮೆರಿಕದ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದನ್ನು ನೀವು ಎಂದಾದರೂ ಕೇಳೀದ್ದೀರಾ? ಅವರು ತಮ್ಮ ದೇಶದ ಬಗ್ಗೆ ಕೆಟ್ಟ ಮಾತುಗಳನ್ನು ಹೇಳುವುದಿಲ್ಲ. ಆದರೆ ರಾಹುಲ್​ಗಾಂಧಿ ಆ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮತ್ತು ಆರ್‌ಎಸ್‌ಎಸ್‌ಗೆ ಗೊತ್ತಿಲ್ಲದೆ ಸುಳ್ಳು ಹೇಳುತ್ತಿದ್ದಾರೆ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಟೀಕಿಸಿದ್ದಾರೆ.

ರಾಹುಲ್​ಗಾಂಧಿ ಅರೆಕಾಲಿಕ ವಿರೋಧ ಪಕ್ಷದ ನಾಯಕ. ಸಾರ್ವಜನಿಕರು ನೀಡಿರುವ ಜವಾಬ್ದಾರಿ ಅವರ ಹೆಗಲ ಮೇಲಿದೆ. ಅವರು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ವಿದೇಶಿ ನೆಲದಲ್ಲಿ ಏನು ಹೇಳಬೇಕೆಂದು ತಿಳಿದಿಲ್ಲ. ಅವರು ಚೀನಾದ ವಿರುದ್ಧ ಒಂದು ಮಾತನ್ನೂ ಹೇಳಲಾಗಲಿಲ್ಲ. ಅವರು ಭಾರತವನ್ನು ದುರ್ಬಲವೆಂದು ಬಿಂಬಿಸುತ್ತಾರೆ ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.
ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಮಾತನಾಡಿದ ರಾಹುಲ್​ ಗಾಂಧಿ ಅವರು, ಭಾರತ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಉದ್ಯೋಗದ ಸಮಸ್ಯೆ ಇದೆ. ಆದರೆ ವಿಶ್ವದ ಹಲವು ದೇಶಗಳಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ಚೀನಾದಲ್ಲಿ ಮತ್ತು ವಿಯೆಟ್ನಾಂನಲ್ಲಿ ಉದ್ಯೋಗ ಸಮಸ್ಯೆ ಇಲ್ಲ ಎಂದು ಹೇಳಿದ್ದರು. (ಏಜೆನ್ಸೀಸ್​​)