ನ್ಯೂಸ್

Karnataka Rains: ಕರ್ನಾಟಕದ ಹಲವೆಡೆ ಮತ್ತೆ ಮಳೆ... ಡಿಸೆಂಬರ್ 28ರವರೆಗೆ ಮಳೆ ಸಾಧ್ಯತೆ

Karnataka Rains:  ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಡಿಸೆಂಬರ್‌ 28ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆ ಇದೆ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ತಮಿಳುನಾಡು, ಆಂಧ್ರಪ್ರದೇಶದ ಜತೆ ಕರ್ನಾಟಕದಲ್ಲೂ ಮಳೆಯಾಗಲಿದೆ ಎನ್ನುವ ಎಚ್ಚರಿಕೆ ನೀಡಲಾಗಿದೆ.  ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.