ನ್ಯೂಸ್

ಕರ್ನಾಟಕದಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆ ಮುನ್ಸೂಚನೆ ಮತ್ತು ಎಚ್ಚರಿಕೆ; Rain alert

Rain alert | ಕರ್ನಾಟಕಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಬಗ್ಗೆ ಹವಾಮಾನ ಇಲಾಖೆ ಗುಡ್‌ನ್ಯೂಸ್‌ ನೀಡಿದೆ. ರಾಜ್ಯದಲ್ಲಿ ಇದೀಗ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಭಾರತೀಯ ಹವಮಾನ ಇಲಾಖೆ, ಕರ್ನಾಟಕದಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು (10) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

2025 ರ ಮೇ 13 ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರ, ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳಿಗೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ.

ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ) ಸಂಭವವಿದೆ.

ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ತುಮಕೂರು, ರಾಮನಗರ, ಮಂಡ್ಯ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ) ಬೀಸುವ ಸಾಧ್ಯತೆ ಇದೆ.