rain 
ನ್ಯೂಸ್

ಮಾರ್ಚ್ 13 ರವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಅಕಾಲಿಕ ಮಳೆಯಾಗಿದ್ದು, ಮಾ.13 ರವರೆಗೆ ಮುಂದುವರಿಯಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಹವಾಮಾನ ಬದಲಾವಣೆಯಿಂದ 2 ದಿನದಿಂದ ಕರಾವಳಿ ಹಾಗೂ ಮಲೆನಾಡು ಸೇರಿ ರಾಜ್ಯದ ಇತರೆ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಅಲ್ಲದೆ ದಿನದಿಂದ ದಿನಕ್ಕೆ ಉಷ್ಣಾಂಶ ಏರಿಳಿತದಿಂದ ತಾಪಮಾನ ಹೆಚ್ಚಳ, ಜತೆಗೆ ಈ ತಿಂಗಳ ವರೆಗೆ ಅಗಾಗ್ಗೆ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು. (ವಿಜಯವಾಣಿ)