• ಗೋರಖ್‌ಪುರದಲ್ಲಿ ಕೇವಲ 2 ಗಂಟೆಯಲ್ಲಿ 100 ಮಿ.ಮೀಗೂ ಹೆಚ್ಚು ಮಳೆ
• ಭಾರಿ ಮಳೆಗೆ ತಾರಾಮಂಡಲ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ
• ಸಂಸದ ರವಿ ಕಿಶನ್ ಅವರ ಮನೆಗೂ ನುಗ್ಗಿದ ಮಳೆ ನೀರು
Uttar Pradesh Rain: ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತಾರಾಮಂಡಲ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ನೀರು ನಿಂತು ಜಲಾವೃತವಾಗಿವೆ. ಭಾರಿ ಮಳೆಯಿಂದ ಬಿಜೆಪಿ ಸಂಸದ ರವಿ ಕಿಶನ್ ಅವರ ಮನೆಗೂ ನೀರು ನುಗ್ಗಿದೆ.
ಮುಂಜಾನೆ ಸುರಿದ ಭಾರಿ ಮಳೆಗೆ ಕೇವಲ ಎರಡು ಗಂಟೆಗಳಲ್ಲಿ 100 ಮಿ.ಮೀಗೂ ಹೆಚ್ಚು ಮಳೆ ದಾಖಲಾಗಿದೆ ಎಂದು ವರದಿಯಾಗಿದೆ. ಇದರಿಂದ ನಗರದ ತಗ್ಗು ಪ್ರದೇಶಗಳು ಹಾಗೂ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಜನರು ತೊಂದರೆ ಅನುಭವಿಸುವಂತಾಗಿದೆ.
ತಮ್ಮ ಮನೆಗೂ ನೀರು ನುಗ್ಗಿದ ಬಳಿಕ ರವಿ ಕಿಶನ್ ಮುಂಜಾನೆಯೇ ರಸ್ತೆಗಿಳಿದರು. ನಗರದ ವಿವಿಧ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಸ್ಥಳೀಯ ಮುನ್ಸಿಪಲ್ ಅಧಿಕಾರಿಗಳೊಂದಿಗೆ ಮಾತನಾಡಿದ ರವಿ ಕಿಶನ್, ಜಲಾವೃತ ಪ್ರದೇಶಗಳಲ್ಲಿ ನಿಂತಿರುವ ನೀರನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಿದರು. ಜನರಿಗೆ ಮತ್ತಷ್ಟು ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದನ್ನೂ ಓದಿ: ನನಗೆ ಪ್ರತಿಷ್ಠೆ ಇಲ್ಲ! ಕುಮಾರಸ್ವಾಮಿ ಯೋಜನೆ ಮುಂದುವರೆಸುತ್ತಿದ್ದೇನೆ ಅಷ್ಟೇ: ಸಿಎಂ ಡಿಕೆಶಿ
ನೀರು ನಿಂತಿರುವ ಪ್ರದೇಶಗಳಲ್ಲಿ ಅಗತ್ಯವಿರುವ ಕಡೆ ಪಂಪ್‌ಗಳನ್ನು ಅಳವಡಿಸಿ ನೀರು ತೆರವುಗೊಳಿಸುವಂತೆ ಸೂಚಿಸಿದರು. ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.