ಬೆಂಗಳೂರು: ಎರಡು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಮೂರು ದಿನ ಮುಂದುವರಿಯಲಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ನ.18ರಿಂದ ನ.19ರವರೆಗೆ ಹಾಗೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ನ.18ರಿಂದ ಮುಂದಿನ ಮೂರು ದಿನ ಮಳೆಯಾಗಲಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲೆಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.