ನ್ಯೂಸ್

ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​

Weather Update 28-09-2023: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರ ವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಸೆಪ್ಟೆಂಬರ್ 28ರಿಂದ 30 ರ ವರೆಗೆ ಕೇರಳ ಹಾಗೂ ಕರ್ನಾಕಟದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.


ಕೊಡುಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು IMD ಮಾಹಿತಿ ನೀಡಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂಬ ಮನ್ಸೂಚನೆ ಜತೆಗೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.


ಕೇರಳದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 9 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.
ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡುಗಳಿಗೆ ಶುಕ್ರವಾರ ಹಳದಿ ಎಚ್ಚರಿಕೆ ನೀಡಲಾಗಿದೆ.


ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ಭಾರೀ ಮಳೆಯಾಗಲಿದೆ. ಅಕ್ಟೋಬರ್ 1 ರಂದು ಎರ್ನಾಕುಲಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.