ನವದೆಹಲಿ: ಭಾನುವಾರ ಬೆಳ್ಳಂಬೆಳಗ್ಗೆಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು, ವಾತಾವರಣ ನೋಡಿದರೆ ಮುಂದಿನ ಮಂಗಳವಾರದವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದೆಹಲಿಯ ಅದಾಮ್ಪುರ್, ಹಿಸ್ಸಾರ್, ಹನ್ಸಿ, ಜಿಂದ್, ಗೊಹನಾ, ಗನ್ನೌರ್, ಬರೂತ್, ರೋಹ್ಟಕ್, ಸೋನಿಪತ್, ಬಾಗಪತ್, ಗುರುಗ್ರಾಮ್, ನೋಯ್ಡಾ, ಘಾಜಿಯಬಾದ್ ಮತ್ತು ಫರೀದಾಬಾದ್ ಸೇರಿದಂತೆ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.
ಸುರಿಯುತ್ತಿರುವ ಭಾರಿ ಮಳೆದ ರಸ್ತೆಗಳು ಜಲಾವೃತವಾಗಿದ್ದು, ಸಂಚಾರಕ್ಕೆ ಅಡೆತಡೆಯಾಗಿದ್ದಲ್ಲದೆ, ಜನಜೀವನವೂ ಅಸ್ತವ್ಯಸ್ತವಾಗಿದೆ. ಹಳ್ಳ ದಿಣ್ಣೆಗಳಲ್ಲಿ ಮಳೆ ನೀರು ತುಂಬಿ ನಿಂತಿದ್ದು, ವಾಹನ ಚಾಲಕರು ಪರದಾಡುತ್ತಿದ್ದಾರೆ.
ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಮುಂದಿನ ಒಂದು ವಾರದವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅದರಲ್ಲೂ ಮುಂದಿನ ಮೂರು ದಿನಗಳಲ್ಲಿ ದೆಹಲಿ, ಹರಿಯಾಣ ಮತ್ತು ಪಂಜಾಬ್ನಲ್ಲಿ ಭಾರಿ ಮಳೆಯಾಗಲಿದೆ. (ಏಜೆನ್ಸೀಸ್)