ಎನ್.ಆರ್.ಪುರ: ಮಾನ್ಸೂನ್ ಪ್ರಾರಂಭದ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳಾದ ಡೆಂೆ, ಮಲೇರಿಯಾ ಕಾಯಿಲೆಗಳು ಹೆಚ್ಚಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಎನ್.ವಿಜಯಕುಮಾರ್ ಹೇಳಿದರು.
ಶನಿವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಾಗೂ ಪಪಂ ಆಶ್ರಯದಲ್ಲಿ ಚುನಾಯಿತ ಪ್ರತಿನಿಧಿಗಳಿಗೆ, ಪಪಂ ಸಿಬ್ಬಂದಿಗೆ ಏರ್ಪಡಿಸಿದ್ದ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ, ಅಂತರ ಇಲಾಖೆ ಸಮನ್ವಯ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ 2 ಡೆಂೆ ಪ್ರಕರಣ ದೃಢಪಟ್ಟಿದೆ. 9 ಸಂಶಯಾಸ್ಪದ ಪ್ರಕರಣಗಳಿವೆ ಎಂದು ತಿಳಿಸಿದರು.
ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಪಪಂ ಸದಸ್ಯರು ಹಾಗೂ ಸಿಬ್ಬಂದಿ ಸಹಕಾರ ಅಗತ್ಯ. ಡೆಂೆ, ಚಿಕುನ್‌ಗುನ್ಯಾ, ಮಲೇರಿಯಾ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ಕಾಯಿಲೆಗಳಾಗಿವೆ. ಡೆಂೆಗೆ ನಿರ್ದಿಷ್ಟ ಚಿಕಿತ್ಸೆ ಇರುವುದಿಲ್ಲ. ಶೀಘ್ರವಾಗಿ ಪತ್ತೆ ಮಾಡಿ ಲಕ್ಷಣ ಆಧಾರಿತ ಚಿಕಿತ್ಸೆ ನೀಡಿ ಗುಣಪಡಿಸಬಹುದು. ಸೊಳ್ಳೆಗಳ ನಿಯಂತ್ರಣಕ್ಕೆ ಮನೆ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ, ಸದಸ್ಯರಾದ ಜುಬೇದಾ, ಉಮಾ, ಸುರಯ್ಯ ಭಾನು, ಸೋಜ, ಕುಮಾರಸ್ವಾಮಿ, ಮುಕಂದ, ವಸೀಂ, ಮುನಾವರ್ ಪಾಷಾ, ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ಪಪಂ ಆರೋಗ್ಯ ನಿರೀಕ್ಷಕ ವಿಜಯಕುಮಾರ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ್, ತಾಲೂಕು ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕ ಪವನ್‌ಕರ್, ಪಪಂ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.