ಚೆನ್ನೈ: ಕಾಲಿವುಡ್ ತಲೈವಾ ರಜನಿಕಾಂತ್ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಬಳಿಕ ಕುಟುಂಬಸ್ಥರು ಸೋಮವಾರ ಮಧ್ಯರಾತ್ರಿ ಅಪೋಲೋ ಆಸ್ಪತ್ರೆಗೆ ದಾಖಲಿಸಿರುವುದು ಗೊತ್ತೇ ಇದೆ. ಸೂಪರ್‌ಸ್ಟಾರ್ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿದ ನಂತರ ಅಭಿಮಾನಿಗಳು ಆಸ್ಪತ್ರೆಯತ್ತ ಮುಗಿಬಿದ್ದು ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿರುವುದರಿಂದ ಅವರ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಇದೀಗ ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ಸಲ್ಮಾನ್-ಶಾರೂಖ್ ಅಭಿಮಾನಿಗಳ ನಡುವೆ ಕೋಲ್ಡ್ ವಾರ್; ಕಾರಣ ಆ ಒಂದು ಪೋಸ್ಟ್.. | Shah Rukh Khan
ರಜನಿ ಆರೋಗ್ಯ ಸ್ಥಿತಿ ಚೆನ್ನಾಗಿದೆ, ಅವರು ಸುರಕ್ಷಿತವಾಗಿದ್ದಾರೆ. ಕೆಲ ಗಂಟೆಗಳ ಕಾಲ ಐಸಿಯುನಲ್ಲಿದ್ದ ರಜನಿ ಅವರನ್ನು ವೈದ್ಯರು ಇದೀಗ ಜನರಲ್ ವಾರ್ಡ್‌ಗೆ ಶಿಫ್ಟ್ ಮಾಡಿದ್ದಾರೆ ಎಂದು ರಜನಿ ಪತ್ನಿ ಲತಾ ಪ್ರತಿಕ್ರಿಯಿಸಿದ್ದರು.
ರಜನಿಕಾಂತ್ ಅವರಿಗೆ ರಕ್ತನಾಳದ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೃದಯಕ್ಕೆ ರಕ್ತ ಪೂರೈಸುವ ಮುಖ್ಯ ರಕ್ತನಾಳ ಊದಿಕೊಂಡು ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಏತನ್ಮಧ್ಯೆ, ರಜನಿಕಾಂತ್ ಅವರಿಗೆ ಶಸ್ತ್ರಚಿಕಿತ್ಸೆಯಿಲ್ಲದ, ಟ್ರಾನ್ಸ್-ಕ್ಯಾತಿಟರ್ ಚಿಕಿತ್ಸೆ ನೀಡಲಾಗಿದೆ. ಊದಿಕೊಂಡ ರಕ್ತನಾಳಕ್ಕೆ ಸ್ಟೆಂಟ್ ಅಳವಡಿಸಲಾಗಿದೆ ಎಂದು ಹೆಲ್ತ್ ಬುಲೆಟಿನ್ನಲ್ಲಿ ಹೇಳಲಾಗಿದೆ. ಅಲ್ಲದೆ ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಎರಡು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಜೈ ಭೀಮ್ ನಿರ್ದೇಶಕ ಜ್ಞಾನವೇಲ್ ನಿರ್ದೇಶನದ ರಜನಿಕಾಂತ್ ಅವರ ವೆಟ್ಟೈಯಾನ್ ಅಕ್ಟೋಬರ್ 10 ರಂದು ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಪವರ್ ಫುಲ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್, ಫಹದ್ ಫಾಸಿಲ್, ರಾಣಾ ದಗ್ಗುಬಾಟಿ ಮತ್ತು ಮಂಜು ವಾರಿಯರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. (ಏಜೆನ್ಸೀಸ್)