ನ್ಯೂಸ್

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಜನಿಕಾಂತ್‌ಗೆ ಆಹ್ವಾನ

ಚೆನ್ನೈ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸುವಂತೆ ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಅವರಿಗೆ ಆಹ್ವಾನ ನೀಡಲಾಗಿದೆ.

ಮೋದಿ ಅವರು ಇದೇ ತಿಂಗಳ 9 ರಂದು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೆ ಹಲವು ವಿದೇಶಿ ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ರಜನಿಕಾಂತ್ ಅವರಿಗೆ ಪ್ರಧಾನಿಯವರ ಕಚೇರಿಯಿಂದ ಆಹ್ವಾನ ಬಂದಿದೆ ಎಂದು ವರದಿಯಾಗಿದೆ.

ಇನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇದೇ ತಿಂಗಳ 12ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಕಾರ್ಯಕ್ರಮಕ್ಕೆ ರಜನಿಕಾಂತ್‌ಗೆ ಆಹ್ವಾನ ಕಳುಹಿಸಲಾಗಿದೆ ಎಂಬ ಮಾಹಿತಿ ಇದೆ. ಇದರೊಂದಿಗೆ ದೆಹಲಿ ಮತ್ತು ಅಮರಾವತಿಯಲ್ಲಿ ಮೋದಿ ಮತ್ತು ಚಂದ್ರಬಾಬು ಪ್ರಮಾಣ ವಚನ ಸಮಾರಂಭದಲ್ಲಿ ರಜನಿಕಾಂತ್ ಪಾಲ್ಗೊಳ್ಳಲಿದ್ದಾರೆ.