ನ್ಯೂಸ್

Nuclear Tests | ಪರಮಾಣು ಪರೀಕ್ಷೆ ಬಗ್ಗೆ ರಾಜನಾಥ್ ಸಿಂಗ್: ಭಾರತ ಸರಿಯಾದ ಸಮಯದಲ್ಲಿ ಸರಿಯಾದ ಹೆಜ್ಜೆ ಇಡುತ್ತದೆ ಎಂದ ರಕ್ಷಣಾ ಸಚಿವ

ನವದೆಹಲಿ: ರಾಷ್ಟ್ರೀಯ ಭದ್ರತೆ ಮತ್ತು ಪರಮಾಣು ಪರೀಕ್ಷೆಯ(Nuclear Tests)ವಿಷಯಗಳಲ್ಲಿ ಭಾರತವು ಬೇರೆ ಯಾವುದೇ ದೇಶದ ಒತ್ತಡಕ್ಕೆ ಒಳಗಾಗುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (ಶುಕ್ರವಾರ ನ.7) ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಸರ್ಕಾರವು ಕೇವಲ ದೇಶದ ಹಿತಾಸಕ್ತಿಗಳನ್ನು ಆಧರಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ರಾಜ್​ನಾಥ್​ ಸಿಂಗ್, ಆಪರೇಷನ್ ಸಿಂಧೂರ್ ಬಗ್ಗೆ ವಿವರವಾದ ವಿವರಣೆಯನ್ನು ನೀಡಿದರು. ಪಾಕಿಸ್ತಾನದೊಂದಿಗೆ ಕದನ ವಿರಾಮವನ್ನು ಖಚಿತಪಡಿಸಿಕೊಳ್ಳಲು ಯಾವುದೇ ಮೂರನೇ ವ್ಯಕ್ತಿಯ ಮಾತನ್ನು ಕೇಳಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೆ, ಪರಮಾಣು ಪರೀಕ್ಷೆಯ ಬಗ್ಗೆ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದು, ಭವಿಷ್ಯವು ಭಾರತ ಏನು ಮಾಡುತ್ತದೆ ಎಂಬುದನ್ನು ನಿರ್ಧರಿಸುತ್ತದೆ. ಅಮೆರಿಕ ಅಥವಾ ಪಾಕಿಸ್ತಾನ ಏನು ಮಾಡುತ್ತಿದೆ ಎಂಬುದರ ಮೇಲೆ ಭಾರತದ ಮೇಲೆ ಒತ್ತಡ ಹೇರಲಾಗುವುದಿಲ್ಲ. ಅವರು ಏನು ಮಾಡಬೇಕೆಂದು ಬಯಸುತ್ತಾರೋ ಅದನ್ನು ಮಾಡಬಹುದು. ನಾವು ಸರಿಯಾದ ಕೆಲಸವನ್ನು ಸರಿಯಾದ ಸಮಯದಲ್ಲಿ ಮಾಡಲು ಭಾವಿಸುತ್ತೇವೆ ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಸಿಂಗ್​, ಆಪರೇಷನ್ ಸಿಂಧೂರವು ಭಾರತವು ಗಡಿ ನಿಯಂತ್ರಣ ರೇಖೆಯಲ್ಲಿ ತನ್ನ ಉದ್ದೇಶಿತ ಗುರಿಗಳನ್ನು ಸಾಧಿಸಿದ ನಂತರವೇ ಕಾರ್ಯಾಚರಣೆಯನ್ನು ರದ್ದುಗೊಳಿಸಲಾಯಿತು ಎಂದು ದೃಢಪಡಿಸಿದ್ದಾರೆ. ಅಲ್ಲದೆ, ಪಾಕಿಸ್ತಾನದ ಡಿಜಿಎಂಒರಿಂದ ಕದನ ವಿರಾಮವನ್ನು ಕೋರಿ ಪದೇಪದೆ ಫೋನ್ ಕರೆಗಳು ಬಂದಿವೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆ ಫೋನ್ ಕರೆಗಳ ನಂತರ, ನಾವು ಸಾಧಿಸಲು ಬಯಸಿದ್ದನ್ನು ಸಾಧಿಸಿದ ನಂತರ, ನಾವು ಕಾರ್ಯಾಚರಣೆಯನ್ನು ಕೊನೆಗೊಳಿಸಿದ್ದೇವೆ. ಅಗತ್ಯವಿದ್ದಲ್ಲಿ ನಾವು ಆಪರೇಷನ್ ಸಿಂಧೂರವನ್ನು ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಭಯೋತ್ಪಾದನೆಯ ಬಗ್ಗೆ ಮಾತನಾಡಿದ ರಕ್ಷಣಾ ಸಚಿವರು, ಭಾರತೀಯ ಸಶಸ್ತ್ರ ಪಡೆಗಳು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸದೆ ಭಯೋತ್ಪಾದಕ ನೆಲೆಗಳನ್ನು ಮಾತ್ರ ಗುರಿಯಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿವೆ ಎಂದು ಸ್ಪಷ್ಟಪಡಿಸಿದರು. ನಾವು ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡಿದ್ದೇವೆ, ನಾಗರಿಕರನ್ನಲ್ಲ ಎಂದಿದ್ದಾರೆ. ಅಲ್ಲದೆ, ಗಡಿಯಾಚೆಗಿನ ದಾಳಿಯ ಸಮಯದಲ್ಲಿ ನಾಗರಿಕರ ಸಾವುನೋವುಗಳ ಬಗ್ಗೆ ಪಾಕಿಸ್ತಾನದ ಹೇಳಿಕೆಗಳನ್ನು ರಾಜ್​ನಾಥ್​ ಸಿಂಗ್​ ತೀವ್ರವಾಗಿ ವಿರೋಧಿಸಿದ್ದಾರೆ.

ಕದನ ವಿರಾಮ ಜಾರಿಗೆ ತರುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾತ್ರ ವಹಿಸಿದ್ದಾರೆಯೇ ಎಂದು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಸಿಂಗ್, ಕದನ ವಿರಾಮ ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತ್ರವಾಗಿದ್ದು, ಯಾವುದೇ ಮೂರನೇ ವ್ಯಕ್ತಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ,(ಏಜೆನ್ಸೀಸ್).