ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಅಧ್ಯಕ್ಷೆ ಡಾ. ಶಾಂತಾ ಸುರೇಂದ್ರ ಮಾತನಾಡಿದರು. 
ನ್ಯೂಸ್

21ಕ್ಕೆ ಒಕ್ಕಲಿಗರ ಮಹಿಳಾ ಸಂಘದಿಂದ ರಾಜ್ಯೋತ್ಸವ

ಶಿವಮೊಗ್ಗ: ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾ ಮಹಿಳಾ ಘಟಕದಿಂದ ಕನ್ನಡ ರಾಜ್ಯೋತ್ಸವ ನ.21ರ ಬೆಳಗ್ಗೆ 10.30ಕ್ಕೆ ಶ್ರೀ ಆದಿಚುಂಚನಗಿರಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷೆ ಡಾ. ಶಾಂತಾ ಸುರೇಂದ್ರ ತಿಳಿಸಿದರು.

ಕನ್ನಡ ನಾಡಿನ ನಡೆ-ನುಡಿ, ಹಿರಿಮೆ-ಗರಿಮೆಯ ಚಲನಚಿತ್ರ ಗೀತೆ, ಭಾವಗೀತೆ, ಜಾನಪದ ಗೀತೆಗಳ ಅಂತ್ಯಾಕ್ಷರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
10 ಮಹಿಳೆಯರನ್ನು ಒಳಗೊಂಡ ಒಂದು ಗುಂಪಿನಂತೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಪ್ರಥಮ, ದ್ವಿತೀಯ, ತೃತೀಯ ವಿಜೇತ ಗುಂಪುಗಳಿಗೆ ನಗದು ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಗುವುದು. ಸಮಾಧಾನಕರ ಗುಂಪಿಗೆ ಬಹುಮಾನವಾಗಿ ಪ್ರಮಾಣಪತ್ರ ನೀಡಲಾಗುವುದು ಎಂದರು.
ಸ್ಪರ್ಧೆಯಲ್ಲಿ ಭಾಗವಹಿಸುವವರು ಹಾಗೂ ಹೆಚ್ಚಿನ ಮಾಹಿತಿಗಾಗಿ 9448024926, 9845948118 ಸಂಪರ್ಕಿಸಬಹುದು ಎಂದರು. ಜಿಲ್ಲಾಧ್ಯಕ್ಷೆ ಪ್ರತಿಮಾ ಡಾಕಪ್ಪ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಮತಾ ಶಿವಣ್ಣ, ಸಹ ಕಾರ್ಯದರ್ಶಿ ಗಾಯತ್ರಿ ಯಲ್ಲಪ್ಪ ಗೌಡ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಎಚ್.ಕೆ.ರಘುರಾಜ್, ಯಲ್ಲಪ್ಪ ಗೌಡ ಇದ್ದರು.