ಬೆಂಗಳೂರು: ಕರೊನಾ ಸೋಂಕು ಹರಡುವಿಕೆಯಲ್ಲಿ ಹಸಿರು ವಲಯದಲ್ಲಿದ್ದ ರಾಮನಗರವನ್ನು ಕೆಂಪು ವಲಯವನ್ನಾಗಿ ಪರಿವರ್ತನೆ ಮಾಡಿದ್ದಕ್ಕೆ ಯಾರು ಹೊಣೆ ಹೊರುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಳುವವರ ಅವಿವೇಕತನದಿಂದ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಮನಗರ ಜಿಲ್ಲೆಯ ಜನರ ನೆಮ್ಮದಿ ಕೆಟ್ಟಿದೆ. ಸೋಂಕು ತಡೆಯಬೇಕಾದ ಸರ್ಕಾರವೇ ಜಿಲ್ಲೆಗೆ ಸೋಂಕು ಹರಡಿದೆ. ಜಿಲ್ಲೆಗೆ ಸೋಂಕು ಹರಡಿದ ಕ್ರಮವನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಅವರು ಟ್ವೀಟರ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹಸಿರು ವಲಯದ ಜಿಲ್ಲೆಗಳಲ್ಲಿ ಕಾರ್ಖಾನೆಗಳ ಆರಂಭಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಮನಗರ ಹೊರತುಪಡಿಸಿ ಎಂದು ಉಲ್ಲೇಖಿಸಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.