ನ್ಯೂಸ್

ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಆನಂದ ಸ್ವಾಮಿ

ರಾಮನಗರ: ಜಿಲ್ಲೆಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆನಂದ ಸ್ವಾಮಿ ನೇಮಕಗೊಂಡಿದ್ದಾರೆ.

ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಸಂಕ್ರಾಂತಿ ಹಬ್ಬದ ಮುನ್ನಾ ದಿನವಾದ ಭಾನುವಾರ ರಾಜ್ಯದ ಎಲ್ಲಾ 31 ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದರು.

ಆರ್ ಎಸ್ ಎಸ್ ಕಾರ್ಯಕರ್ತರಾಗಿ, ಬಿಜೆಪಿ ಪಕ್ಷದ ತಾಲೂಕು ಘಟಕದ ವಿವಿಧ ಹುದ್ದೆಗಳಲ್ಲಿ ಹಾಗೂ ವಿವಿಧ ಚುನಾವಣೆಗಳಲ್ಲಿ ಪಕ್ಷ ನೀಡಿದ್ದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದ ಆನಂದ ಸ್ವಾಮಿ ಪಕ್ಷ ನಿಷ್ಠ ಕಾರ್ಯಕರ್ತ ರಾಗಿದ್ದಾರೆ.

ಜಿಲ್ಲೆಯಲ್ಲಿ 18 ಮಂದಿ ಅಧ್ಯಕ್ಷ ಸ್ಥಾನಕ್ಕಾಗಿ ತಮ್ಮ ಉಮೇದುವಾರಿಕೆಯನ್ನು ಪಕ್ಷದ ವೀಕ್ಷಕರ ಮುಂದೆ ಸಲ್ಲಿಕೆ ಮಾಡಿದ್ದರು. ಇವರಲ್ಲಿ ಎಸ್ ಆರ್ ನಾಗರಾಜು, ಪ್ರಸಾದ್ ಗೌಡ ಸೇರಿದಂತೆ ನಾಲ್ವರ ನಡುವೆ ಪ್ರಭಲ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಅಧ್ಯಕ್ಷ ಸ್ಥಾನ ಆನಂದ ಸ್ವಾಮಿ ಅವರಿಗೆ ಲಭಿಸಿದೆ.