ನ್ಯೂಸ್

ರಾಮನಗರದಲ್ಲಿ ಗಾಳಿಪಟ ಉತ್ಸವ

ಗಂಗಾಧರ ಬಿ ವಿ

ವಿಜಯವಾಣಿ ಸುದ್ದಿಜಾಲ

ರಾಮನಗರ: ಕರ್ನಾಟಕ ಜಾನಪದ ಪರಿಷತ್ತು, ರಾಜ್ಯ ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಅವರ ಸಂಯುಕ್ತಾಶ್ರದಲ್ಲಿ ಜು. 29 ರಂದು ಬೆಳಗ್ಗೆ 9.30 ಗಂಟೆಗೆ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ 32 ನೇ ವರ್ಷದ ಗಾಳಿಪಟ ಉತ್ಸವವನ್ನು ಆಯೋಜಿಸಲಾಗಿದೆ.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಗಾಳಿಪಟ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವ ಆನಂದ್‌ಸಿಂಗ್ ಗಾಳಿಪಟ ಕಾರ್ಯಗಾರವನ್ನು ಉದ್ಘಾಟಿಸಲಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿತಾ ಕುಮಾರಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಸ್ಪರ್ಧೆ ವಿವರ: ನಗರದಲ್ಲಿ ಹಮ್ಮಿಕೊಂಡಿರುವ ಗಾಳಿಪಟ ಉತ್ಸವದಲ್ಲಿ 17 ವರ್ಷದೊಳಗಿನ ಮಕ್ಕಳು ಪಾಲ್ಗೊಳ್ಳಬಹುದು. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಜುಲೈ 29 ರಂದು ಬೆಳಗ್ಗೆ 9 ಗಂಟೆಯೊಳಗೆ ಸ್ಥಳದಲ್ಲಿಯೇ ನೊಂದಾಯಿಸಿಕೊಳ್ಳುವುದು. ಗಂಡು ಮತ್ತು ಹೆಣ್ಣು ಮಕ್ಕಳಿಗೆ ಬೇರೆ ವಿಭಾಗಗಳಿದ್ದು ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳಿರುತ್ತವೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-23605033/7795632294 ಅನ್ನು ಸಂಪರ್ಕಿಸುವುದು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.