ನ್ಯೂಸ್

ಡಿವೈಡರ್​ಗೆ ಡಿಕ್ಕಿ ಹೊಡೆದು ಎದುರಿಗೆ ಬರುತ್ತಿದ್ದ ಬೈಕ್​ಗೆ ಗುದ್ದಿದ ಕಾರು: ಸ್ಥಳದಲ್ಲೇ ಇಬ್ಬರು ಸಾವು, ಮತ್ತೊಬ್ಬ ಗಂಭೀರ

ರಾಮನಗರ: ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು, ಅಲ್ಲಿಂದ ಹಾರಿ ಎದುರಿಗೆ ಬರುತ್ತಿದ್ದ ಬೈಕ್​ಗೆ ಗುದ್ದಿದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಅವಘಡ ಸಂಭವಿಸಿದೆ.

ರಾಹುಲ್(18), ಅಭಿಷೇಕ್ (21) ಮೃತರು. ಇವರು ಚನ್ನಪಟ್ಟಣ ತಾಲೂಕಿನ ಸೀಬನಹಳ್ಳಿ ಗ್ರಾಮದ ‌ನಿವಾಸಿಗಳು. ಮತ್ತೊಬ್ಬ ಬೈಕ್ ಸವಾರ ಹರ್ಷಿತ್ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ನಿಮಾನ್ಸ್​ಗೆ ರವಾನಿಸಲಾಗಿದೆ.

ಕಾರು ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿತ್ತು. ಬೈಕ್​ ಮೈಸೂರು ಕಡೆಯಿಂದ ಚನ್ನಪಟ್ಟಣ ಕಡೆಗೆ ಬರುತ್ತಿತ್ತು. ಈ ವೇಳೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹಾರಿ ಬೈಕ್​ಗೆ ಗುದ್ದಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)