ನ್ಯೂಸ್

ಹೈಕೋರ್ಟ್ ಮೆಟ್ಟಿಲೇರಿದ ರಮೇಶ್ ಗೌಡ

Bengaluru - General - Pavithra Kundapur

ಬೆಂಗಳೂರು : ಉದ್ಯಮಿ ವಿಜಯ್ ತಾತಾಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ತಮ್ಮ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಮಾಜಿ ಎಂಎಲ್‌ಸಿ ರಮೇಶ್ ಗೌಡ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.

ರಮೇಶ್ ಗೌಡ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ವಿಚಾರಣೆ ಬಂದಿತ್ತು.

ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಹಾಜರಾಗಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್ ಸ್ವಾಮಿ ಕೂಡ ಆರೋಪಿಯಾಗಿದ್ದಾರೆ ಎಂಬುವುದನ್ನು ಪೀಠದ ಗಮನಕ್ಕೆ ತಂದರು.

ವಾದ ಆಲಿಸಿದ ನ್ಯಾಯಪೀಠ ಅರ್ಜಿಯಲ್ಲಿರುವ ತಾಂತ್ರಿಕ ನ್ಯೂನ್ಯತೆ ಸರಿಪಡಿಸಿಕೊಳ್ಳಿ ಎಂದು ಅರ್ಜಿದಾರರ ಪರ ವಕೀಲರಿಗೆ ಸಲಹೆ ನೀಡಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.