ನ್ಯೂಸ್

ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್‌ ಜಾರಕಿಹೊಳಿ ಪುತ್ರ; ಸುಮೋಟೋ ಕೇಸ್ ದಾಖಲು| sumoto-case

ಬೆಳಗಾವಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್​ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ ಅವರು, ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಜಾತ್ರೆಯಲ್ಲಿ ನೂರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ.

ಇನ್ನೂ ಈ ಸಂಬಂಧ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.