ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಎಲ್ಲಾ ಭಾಷೆಯ ಚಿತ್ರರಂಗದಲ್ಲೂ ಸ್ನೇಹಿತರಿದ್ದರು. ಎಲ್ಲರ ಜತೆಗೂ ಆತ್ಮೀಯವಾದ ಬಾಂಧವ್ಯ ಹೊಂದಿದ್ದರು. ಯಾವುದೇ ವೇದಿಕೆಗೆ ಹೋದರೂ ಪುನೀತ್ ಅವರ ಜತೆಗಿನ ಒಡನಾಟಡ ನೆನಪುಗಳನ್ನು ಹಂಚಿಕೊಳ್ಳುತ್ತಾರೆ. ಇದೀಗ ತೆಲುಗಿನ ಸ್ಟಾರ್ ನಟ ರಾಣಾ ದಗ್ಗುಬಾಟಿ ಪುನೀತ್ ರಾಜ್ ಕುಮಾರ್ ಅವರನ್ನ ನೆನಪಿಸಿಕೊಂಡಿದ್ದಾರೆ.
ಎಲ್ಲೇ ಹೋದರೂ ನಟ ಪುನೀತ್ ರಾಜ್ ಕುಮಾರ್ ಅವರ ಫೋಟೋ, ಪುತ್ತಳಿ ಕಾಣಸಿಗುತ್ತದೆ. ವಿಶೇಷ ಏನೆಂದರೆ ಟಾಲಿವುಡ್ ನಟ ರಾಣಾ ದಗ್ಗುಬಾಟಿ ತಮ್ಮ ಕಚೇರಿಯಲ್ಲಿ ಪುನೀತ್ ಅವರ ನೆನಪಿನಲ್ಲಿ ಪುತ್ಥಳಿಯೊಂದನ್ನ ಇರಿಸಿದ್ದಾರೆ. ಈ ಬಗ್ಗೆ ಅವರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿಯನ್ನು ತಮ್ಮ ಆಫೀಸಿನಲ್ಲಿ ಇರಿಸಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ರಾಣಾ, 'ಸುಂದರವಾದ ಸ್ಮರಣಿಕೆಯೊಂದು ನನ್ನ ಕಚೇರಿ ತಲುಪಿದೆ. ಮಿಸ್ ಯೂ ಮೈ ಫ್ರೆಂಡ್ ಪುನೀತ್ ರಾಜ್ ಕುಮಾರ್' ಎಂದು ಬರೆದುಕೊಂಡಿದ್ದಾರೆ.
ರಾಣಾ ದಗ್ಗುಬಾಟಿ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ನೋಡಿದ ಅಪ್ಪು ಅಭಿಮಾನಿಗಳು ಖುಷಿಯಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ದಿವಂಗತರಾಗಿ ಒಂದು ವರ್ಷ ಸಮೀಪಿಸುತ್ತಿದೆ. ಇಂದಿಗೂ ಕೂಡ ಅಭಿಮಾನಿಗಳು ಅವರ ಹೆಸರಿನಲ್ಲಿ ಸಮಾಜಮುಖಿ ಕಾರ್ಯ ಮಾಡಿಕೊಂಡು ಬರುತ್ತಿದ್ದಾರೆ.