ರಾಣೆಬೆನ್ನೂರ: ಇಲ್ಲಿಯ ಶಹರ ಠಾಣೆ ವತಿಯಿಂದ ಹಾವೇರಿ ಜಿಲ್ಲಾ ಪೊಲೀಸ್, ದಾವಣಗೆರೆ ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನ. 28ರಂದು ಬೆಳಗ್ಗೆ 10 ಗಂಟೆಗೆ ನಗರದ ಶಹರ ಪೊಲೀಸ್ ಠಾಣೆ ಆವರಣದಲ್ಲಿ 6ನೇ ಬಾರಿಯ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪಿಎಸ್‌ಐ ಗಡ್ಡೆಪ್ಪ ಗುಂಜುಟಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.