ಶನಿವಾರಸಂತೆಯ ಗುಡುಗಳಲೆ ಜಾತ್ರಾ ಮೈದಾನದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಹಿಳೆಯರು.
ಶನಿವಾರಸಂತೆ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಅಕ್ಕ ಮಹಾದೇವಿ ಜಯಂತಿ ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತ್ಯುತ್ಸವದ ಅಂಗವಾಗಿ ಗುರುವಾರ ಸಮೀಪದ ಗುಡುಗಳಲೆ ಜಾತ್ರಾ ಮೈದಾನದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸ್ಪರ್ಧೆಯಲ್ಲಿ ಭಾಗವಹಿಸಿದ ಮಹಿಳೆಯರು ವಿವಿಧ ಬಗೆಯ ರಂಗೋಲಿಗಳನ್ನು ಬಿಡಿಸುವ ಮೂಲಕ ಗಮನ ಸೆಳದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.