Ranya Rao: ಚಿನ್ನ ಕಳ್ಳಸಾಗಣೆ ಆರೋಪದಡಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆದೇಶವನ್ನು ಮಾ.27ರಂದು ಕಾಯ್ದಿರಿಸಿತ್ತು. ಆದೇಶ ಪ್ರಕಟಿಸಿದ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ, ರನ್ಯಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಈ ಮೂಲಕ ನಟಿಗೆ ಪರಪ್ಪನ ಅಗ್ರಹಾರ ಜೈಲೇ ಗತಿ ಎಂಬುದು ಸ್ಪಷ್ಟವಾಯಿತು. ಆದರೆ, ಇದೀಗ ಹೈಕೋರ್ಟ್ ಮೊರೆ ಹೋಗಿರುವ ರನ್ಯಾ, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ಟೀಮ್ನಲ್ಲಿ ಜಾಸ್ಮಿನ್ ವಾಲಿಯಾ ಪ್ರತ್ಯಕ್ಷ! ಹಾರ್ದಿಕ್ ಜತೆಗೆ ಡೇಟಿಂಗ್ ವದಂತಿ ಈಗಲೂ ಸುಳ್ಳೇ!? | Jasmin
ಮೂರನೇ ಬಾರಿಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿತು. ಇದರ ಬೆನ್ನಲ್ಲೇ ಈಗ ರಾಜ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ರನ್ಯಾ ರಾವ್, ಇಲ್ಲಿಯಾದರೂ ತನಗೆ ಬೇಲ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ನಟಿಯ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದಿನ ವಾರ ನಡೆಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಮಾ.03ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರಿಂದ 14.56 ಕೋಟಿ ರೂ. ಮೌಲ್ಯದ 14 ಕೆಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡ ಪೊಲೀಸರು, ಕೆಲವೇ ಕ್ಷಣದಲ್ಲಿ ನಟಿಯನ್ನು ಬಂಧಿಸಿ, ತನಿಖೆಗೆ ಒಳಪಡಿಸಿದರು. ಒಂದೇ ವರ್ಷದಲ್ಲಿ 27 ಬಾರಿ ದುಬೈಗೆ ಭೇಟಿ ನೀಡಿದ್ದ ಚೆಲುವೆ, 14.2 ಕೆಜಿ ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ಸಾಗಿಸುವಾಗ ಸಿಕ್ಕಿಬಿದ್ದರು. ಅಧಿಕಾರಿಗಳ ಕಣ್ತಪ್ಪಿಸಿ ಇಷ್ಟೊಂದು ಚಿನ್ನವನ್ನು ಹೇಗೆ ಸಾಗಿಸುತ್ತಿದ್ದರು? ಇಂಥಾ ಕೆಲಸಕ್ಕೆ ‘ಮಾಣಿಕ್ಯ’ ನಟಿ ಕೈಹಾಕಿದ್ದೇಕೆ? ಎಂಬ ಗೊಂದಲ ಹಲವರಲ್ಲಿ ಮೂಡಿದೆ. ಸದ್ಯ ಇದಕ್ಕೆ ಉತ್ತರ ಹುಡುಕುತ್ತಿರುವ ಖಾಕಿ ಪಡೆ, ಪಾತ್ರಧಾರಿ ಹಿಂದಿರುವ ಸೂತ್ರಧಾರಿಗಾಗಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ,(ಏಜೆನ್ಸೀಸ್).