Rapper Vedan: ರ‍್ಯಾಪರ್ ವೇದನ್ ವಿರುದ್ಧದ ಅತ್ಯಾಚಾರ ಆರೋಪಗಳ ತನಿಖೆಯು ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಪುಟ್ಟ ವಿಮಲಾದಿತ್ಯ ಬುಧವಾರ ಹೇಳಿದ್ದಾರೆ.
ವೈದ್ಯೆಯೊಬ್ಬರು ಮಾಡಿರುವ ಅತ್ಯಾಚಾರ ಆರೋಪದ ಮೇಲೆ ಕಲಾವಿದೆ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಪರಿಗಣಿಸುತ್ತಿರುವ ಸಂದರ್ಭದಲ್ಲಿ ಈ ಹೇಳಿಕೆ ಹೊರಬಂದಿದೆ.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಮಲಾದಿತ್ಯ, ಪೊಲೀಸರು ಎಂದಿಗೂ ವೇದನ್ ಪರವಾಗಿಲ್ಲ. ಆತನನ್ನು ಪತ್ತೆಹಚ್ಚಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ತನಿಖೆ ವೇದನ್ ಪರವಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, ಪ್ರಸ್ತುತ ವೇದನ್ ತಲೆಮರೆಸಿಕೊಂಡಿದ್ದಾನೆ. ನಾವು ಆತನನ್ನು ಪತ್ತೆಹಚ್ಚಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇವೆ. ಪ್ರಕರಣದ ತನಿಖೆ ಸರಿಯಾದ ಹಾದಿಯಲ್ಲಿ ಸಾಗುತ್ತಿದ್ದು, ಸಾಕ್ಷಿ ಸಂಗ್ರಹಣೆ ನಡೆಯುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ; 10ನೇ ತರಗತಿ ವಿದ್ಯಾರ್ಥಿಯನ್ನು ಚಾಕು ಇರಿದು ಕೊಂದ ಜೂನಿಯರ್ ವಿದ್ಯಾರ್ಥಿ| Student Murder
ಕಳೆದ ವಾರ ರ‍್ಯಾಪರ್ ವೇದನ್ ವಿರುದ್ಧ ಇಬ್ಬರು ಮಹಿಳೆಯರು ಕೇರಳ ಸಿಎಂಗೆ ದೂರು ನೀಡಿದ್ದು, ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವೇಳೆ ದೂರು ಸ್ವೀಕರಿರಿಸದ ಸಿಎಂ, ಈ ವಿಚಾರದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ, ನಿರ್ಧಾರ ತೆಗೆದುಕೊಳ್ಳುತ್ತೇವೆ.
ಹಾಗೆಯೇ ವೇದನ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ಪ್ರಸ್ತುತ ನ್ಯಾಯಾಲಯದ ಪರಿಶೀಲನೆಯಲ್ಲಿದೆ. ನ್ಯಾಯಾಲಯದ ನಿರ್ದೆಶನದಂತೆ ನಾವು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ವೇದನ್ ದೇಶ ಬಿಟ್ಟು ಹೋಗಿರುವ ಸಾಧ್ಯತೆ ಇಲ್ಲ. ಆತ ದೇಶವನ್ನು ಬಿಟ್ಟು ಹೋಗದಂತೆ ತಡೆಯಲು ನಾವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ವಿಮಲಾದಿತ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ನಿಮ್ಮ ಕೂದಲು ಹೆಚ್ಚಾಗಿ ಉದುರುತ್ತಿದೆಯಾ.? ಹಾಗಿದ್ರೆ ನಿರ್ಲಕ್ಷಿಸಬೇಡಿ ಇದು ಇತರ ಕಾಯಿಲೆಯ ಲಕ್ಷಣವಾಗಿರಬಹುದು| hair fall
ವೇದನ್ ಮದುವೆಯಾಗುವುದಾಗಿ ಭರವಸೆ ನೀಡಿ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಈತನ ವಿರುದ್ಧ ತ್ರಿಕ್ಕಾಕರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಈ ಕೇಸಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ ನಂತರ, ವೇದನ್ ತಲೆಮರೆಸಿಕೊಂಡಿದ್ದಾನೆ. ಹಾಗಾಗಿ ಪೊಲೀಸರು ಆತನಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. (ಏಜೆನ್ಸೀಸ್)