ನ್ಯೂಸ್

ರಶ್ಮಿಕಾರಿಂದ ‘ಸಿಕಂದರ್​’ ಚಿತ್ರೀಕರಣ ನಿಲ್ಲಿಸಿದ ಚಿತ್ರತಂಡ; ಕಾರಣ ಹೀಗಿದೆ.. | Rashmika Mandanna

ಮುಂಬೈ: ಕನ್ನಡದ ಕಿರಿಕ್​ ಪಾರ್ಟಿ ಸಿನಿಮಾದ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ನಟಿ ರಶ್ಮಿಕಾ ಮಂದಣ್ಣ(Rashmika Mandanna) ಅವರನ್ನು ಪ್ಯಾನ್​ ಇಂಡಿಯಾ ಸ್ಟಾರ್​ ಎಂದರೆ ತಪ್ಪಲ್ಲ. ಕನ್ನಡದ ಬಳಿಕ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿ ಸೈ ಎನ್ನಿಸಿಕೊಂಡ ರಶ್ಮಿಕಾ ಬಾಲಿವುಡ್​ನಲ್ಲೂ ತನ್ನ ಅದೃಷ್ಟ ಪರೀಕ್ಷೆ ಮಾಡಿ ಗೆದ್ದಿದ್ದಾರೆ. ಇತ್ತೀಚೆಗೆ ಬಿಡುಗಡೆಗೊಂಡ ಪುಷ್ಟ 2; ದಿ ರೂಲ್​ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಸಖತ್​ ಸೌಂಡ್ ಮಾಡ್ತಿದೆ.

ಅಂದ್ಹಾಗೆ ಬಾಲಿವುಡ್​ ಭಾಯಿಜಾನ್​ ಸಲ್ಮಾನ್​ ಖಾನ್​ ಜತೆ ಸಿಕಂದರ್​ ಸಿನಿಮಾದಲ್ಲಿ ರಶ್ಮಿಕಾ ಕಾಣಿಸಿಕೊಳ್ಳುತ್ತಿರುವುದು ಗೊತ್ತೆ ಇದೆ. ಜನವರಿ 10ರಂದು ಸಿನಿಮಾ ಕೊನೆಯ ಶೆಡ್ಯೂಲ್​​ ಅನ್ನು ಪ್ರಾರಂಭಿಸಲು ಯೋಜಿಸಲಾಗಿತ್ತು. ಆದರೆ ರಶ್ಮಿಕಾ ಅವರ ಕಾರಣದಿಂದಾಗಿ ಸಿನಿಮಾ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ.

ಹೌದು ರಶ್ಮಿಕಾ ಮಂದಣ್ಣ ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ಗಾಯಗೊಂಡಿದ್ದಾರೆ ಎಂದು ನಟಿಯ ಮೂಲಗಳು ತಿಳಿಸಿವೆ. ಬಿಡುವಿಲ್ಲದೆ ತನ್ನ ಕೆಲಸದಲ್ಲಿ ನಿರತರಾಗಿರುವ ರಶ್ಮಿಕಾ ಮಂದಣ್ಣ ಅವರಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಾಗಿ ಸಿಕಂದರ್​​ ಚಿತ್ರದ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಅದೃಷ್ಟವಶಾತ್ ದೊಡ್ಡ ಅಘಾತವಾಗಿಲ್ಲ. ವಿಶ್ರಾಂತಿ ಪಡೆಯುತ್ತಿರುವ ರಶ್ಮಿಕಾ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಸಿನಿಮಾ್​ ಸೆಟ್​​ಗೆ ಶೀಘ್ರದಲ್ಲೇ ಮರಳಲಿದ್ದಾರೆ ಎಂದು ಹೇಳಿದ್ದಾರೆ. ಮಾರ್ಚ್​ಗೆ ಸಿನಿಮಾ ರಿಲೀಸ್ ಂಆಡಲು ಟೈಮ್ ಲೈನ್ ಇದ್ದರೂ ನಿಗದಿತ ಸಮಯಕ್ಕೆ ಶೂಟಿಂಗ್ ಮುಗಿಸಲು ಚಿತ್ರತಂಡ ಬಯಸಿದೆ.

ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರು ಪ್ರತಿದಿನ ಹೊಸ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಹೊಸ ವರ್ಷದ ಸಮಯದಲ್ಲಿ ತಮ್ಮ ಫೋಟೋವೊಂದನ್ನು ಶೇರ್​ ಮಾಡಿ ಹೊಸ ವರ್ಷದ ಶುಭಾಶಯಗಳನ್ನು ಹಂಚಿಕೊಂಡಿದ್ದರು. ನಾವೆಲ್ಲರೂ ಒಟ್ಟಾಗಿ 2025 ಅದ್ಭುತ ವರ್ಷವನ್ನು ಆಚರಿಸೋಣ ಎಂದು ಹೇಳಿದ್ದರು. ಎಆರ್ ಮುರುಗದಾಸ್ ನಿರ್ದೇಶನದ 'ಸಿಕಂದರ್' ಚಿತ್ರದಲ್ಲಿ ಸಲ್ಮಾನ್​ ಖಾನ್​ ಮತ್ತು ರಶ್ಮಿಕಾ ಜತೆಗೆ ಸತ್ಯರಾಜ್, ಕಾಜಲ್ ಅಗರ್ವಾಲ್, ಪ್ರತೀಕ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಈದ್ 2025 ರಂದು ಸಿನಿಮಾ ಬಿಡುಗಡೆಯಾಗಲಿದೆ.(ಏಜೆನ್ಸೀಸ್​​)