ಮೈಸೂರು: ನಂಜನಗೂಡು ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಗಳಲ್ಲಿರುವ ಸದಸ್ಯರು ಈ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ತಾಲ್ಲೂಕಿನ ವ್ಯಾಪ್ತಿಯ 8827 ಪಡಿತರ ಚೀಟಿದಾರರ ಸದಸ್ಯರು ತಮ್ಮ ಪಡಿತರ ಚೀಟಿಗೆ ಈವರೆವಿಗೂ ಈ-ಕೆವೈಸಿ ಮಾಡಿಸಿಕೊಳ್ಳದಿರುವುದು ಕಂಡುಬoದಿದ್ದು, ಆಗಸ್ಟ್ 31 ರೂಳಗೆ ಈ-ಕೆವೈಸಿ ಮಾಡಿಸಿಕೊಳ್ಳಲು ಅಂತಿಮ ಗಡುವು ನೀಡಲಾಗಿರುತ್ತದೆ.
ಈ-ಕೆವೈಸಿ ಬಾಕಿ ಇರುವ ಪಡಿತರ ಚೀಟಿಗಳ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ-ಕೆವೈಸಿ ಮಾಡಿಸಿಕೊಳ್ಳುವಂತೆ ಸೂಚಿಸಿದ್ದು, ಆಗಸ್ಟ್-31 ರೂಳಗೆ ಮಾಡಿಸಿಕೊಳ್ಳದಿದ್ದಲ್ಲಿ ಅಂತಹ ಪಡಿತರ ಚೀಟಿದಾರರ ಸದಸ್ಯರ ಹೆಸರನ್ನು ಪಡಿತರ ಚೀಟಿಯಿಂದ ತೆಗೆದು ಹಾಕಲಾಗುವುದು ಎಂದು ನಂಜನಗೂಡು ತಾಲೂಕಿನ ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ
ಮೈಸೂರು,ಆ.23(ಕರ್ನಾಟಕ ವಾರ್ತೆ):- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಭಾರತ ಸರ್ಕಾರದ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ, ಹೈದ್ರಾಬಾದ್ ಮತ್ತು ಮೀನುಗಾರಿಕಾ ಇಲಾಖೆಯ ಸಹಭಾಗಿತ್ವದಲ್ಲಿ “Blue Revolution for Sustainable Fisheries Development” ಎಂಬ ವಿಷಯದ ಕುರಿತು ಸೆಪ್ಟೆಂಬರ್ 25 ರಿಂದ 27 ರ ವರೆಗೆ ಅಕಾಡೆಮಿಯ ಕಛೇರಿಯಲ್ಲಿ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.
ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ನುರಿತ ವಿಜ್ಞಾನಿಗಳಿಂದ ತಾಂತ್ರಿಕ ಉಪನ್ಯಾಸಗಳು ನಡೆಯಲಿದ್ದು, ಮೀನುಗಾರಿಕಾ ಉದ್ಯಮಗಳಿಂದ ಪ್ರದರ್ಶನ ಮಳಿಗೆಯನ್ನು ಸಹ ಏರ್ಪಡಿಸಲಾಗಿದೆ. ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು Research Paper presentation ಮಂಡಿಸಲು ಸಹ ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ Research Paper ಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು.
ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಮೀನುಗಾರಿಕಾ ಉದ್ಯಮಿಗಳು ಭಾಗವಹಿಸಬಹುದಾಗಿದ್ದು, ಆಸಕ್ತ ಪ್ರತಿನಿಧಿಗಳು https://forms.gle/jAsgv6kGf6W34Lpa8 ಗೂಗಲ್ ಫಾರ್ಮ್ ಮೂಲಕ ಸೆಪ್ಟೆಂಬರ್ 10 ರೊಳಗೆ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಧಿಕಾರಿ ಅವರ ಮೊ.ನಂ:9620767819 ಮತ್ತು ದೂ.ಸಂ: 080-29721550 ಅಥವಾ ಅಕಾಡೆಮಿಯ ವೆಬ್‌ಸೈಟ್ www.kstacademy.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಡಾ.ಎ.ಎಂ ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.