ನ್ಯೂಸ್

ಪಡಿತರ ಕಿಟ್ ವಿತರಣೆ

Mysuru Rural

ಬೈಲಕುಪ್ಪೆ: ಹೋಂ ಕ್ವಾರಂಟೈನ್‌ಗೊಳಗಾಗಿದ್ದ ಸಮೀಪದ ನೀಲವಾಡಿ ಗೇಟ್‌ನ ಸಮೀವುಲ್ಲಾ ಕುಟುಂಬಕ್ಕೆ ಚೆನ್ನಕಲ್ಲು ಕಾವಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಂದರೇಗೌಡ ಆಹಾರ ಪದಾರ್ಥಗಳ ಕಿಟ್ ವಿತರಿಸಿದರು.

ಹೊರ ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಸಮೀವುಲ್ಲಾ ಅವರನ್ನು ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹೋಂ ಕ್ವಾರಂಟೈನ್‌ಗೆ ಒಳಪಡಿಸಿದ್ದರು. ಹೀಗಾಗಿ ಮಾನವೀಯತೆ ದೃಷ್ಟಿಯಿಂದ ಸುಂದರೇಗೌಡ ತಮ್ಮ ಸ್ವಂತ ಖರ್ಚಿನಲ್ಲಿ ಅಕ್ಕಿ, ಬೇಳೆ, ಎಣ್ಣೆ, ತರಕಾರಿ, ಸೋಪು ಸೆರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಿ ಕುಟುಂಬದವರಿಗೆ ಹಸ್ತಾಂತರಿಸಿದರು.

ಪಿಡಿಒ ಮಂಜುನಾಥ್, ಕಾರ್ಯದರ್ಶಿ ರಾಮಯ್ಯ ಮತ್ತಿತರರು ಹಾಜರಿದ್ದರು.