ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಫಾರ್ಮ ಹೌಸ್‌ನಲ್ಲಿ ಇತ್ತೀಚೆಗೆ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮೂವತ್ತು ಮಂದಿಗೆ ಸಿಸಿಬಿ ನೋಟಿಸ್ ನೀಡಿದೆ.
ನಗರದ ಹೊರವಲಯದಲ್ಲಿರುವ ಜಿ.ಎಂ.ಫಾರ್ಮ್ ಹೌಸ್‌ನಲ್ಲಿ ಹುಟ್ಟುಹಬ್ಬ ಸೋಗಿನಲ್ಲಿ ಆಯೋಜಿಸಿದ್ದ ರೇವ್ ಪಾರ್ಟಿಯಲ್ಲಿ ಸುಮಾರು ೨೫೦ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಆಂಧ್ರದ ಮೂಲದ ನಟಿಯರು, ಉದ್ಯಮಿಗಳು ಸೇರಿದಂತೆ ಅನೇಕರು ಒಳಗೊಂಡಿದ್ದರು. ಪಾರ್ಟಿಯಲ್ಲಿ ಯಥೇಚ್ಚವಾಗಿ ಡ್ರಗ್ಸ್ ಬಳಕೆ ಮಾಡಿದ್ದ ಮಾಹಿತಿ ಹಿನ್ನೆಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದರು. ಭಾಗಿಯಾಗಿದ್ದವರ ಪೈಕಿ ೮೬ ಮಂದಿ ಡ್ರಗ್ಸ್ ಸೇವನೆ ಮಾಡಿರುವುದು ವೈದ್ಯಕೀಯ ವರದಿಯಲ್ಲಿ ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಆರೋಪಿಗಳು ವಿಚಾರಣೆಗೆ ಗೈರು ಹಾಜರಾಗಿದ್ದರು. ಇದೀಗ ಸಿಸಿಬಿ ವಿಚಾರಣೆ ಹಾಜರಾಗುವಂತೆ ಮತ್ತೆ ನೋಟಿಸ್ ನೀಡಿದೆ.
ನಟಿ ಹೇಮಾಗೆ ನ್ಯಾಯಾಂಗ ಬಂಧನ:
ನಟಿ ಹೇಮಾಗೆ ಜೂ. ೧೪ ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆನೇಕಲ್‌ನ ಜೆಎಂಎ್ಸಿ ಕೋರ್ಟ್ ಆದೇಶಿಸಿದೆ. ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಫಾರ್ಮ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಿರುವುದು ವೈದ್ಯಕೀಯ ವರದಿಯಲ್ಲಿ ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು, ವಿಚಾರಣೆಗೆ ಹಾಜರಾಗಿದ್ದ ಹೇಮಾ ಅವರನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್ ಆರೋಪಿಗೆ ೧೨ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ಹೇಮಾ ಅವರ ವಿಚಾರಣೆ ನಡೆಸುವ ಅಗತ್ಯವಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಆಕೆಯನ್ನು ಬಾಡಿವಾರೆಂಟ್ ಮೇಲೆ ಬುಧವಾರ ವಶಕ್ಕೆ ಪಡೆದುಕೊಂಡಿದ್ದರು. ಬಾಡಿ ವಾರೆಂಟ್ ೨೪ ಗಂಟೆಯ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಆಕೆಯನ್ನು ಗುರುವಾರ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್ ಜೂ.೧೪ ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.