ನ್ಯೂಸ್

ಸುಳ್ಳು ಆರೋಪ ಮಾಡಿದ ವ್ಯಕ್ತಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ KGF ನಟಿ

ಮುಂಬೈ: ಮುಂಬೈನ ಬಾಂದ್ರಾ ಉಪನಗರದಲ್ಲಿ ತಡರಾತ್ರಿ ಬಾಲಿವುಡ್ ನಟಿ ರವೀನಾ ಟಂಡನ್ ಮೂವರ ಮೇಲೆ ದೌರ್ಜನ್ಯ ಎಸಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಸ್ಥಳೀಯರು ನಟಿಯನ್ನು ಸುತ್ತುವರೆದು ಹಲ್ಲೆ ಮಾಡಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿತ್ತು. ಈ ಪ್ರಕರಣ ಕುರಿತಾಗಿ ನಟಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ.

ನಡೆದಿದ್ದೇನು?: ಕೆಲವೇ ದಿನಗಳ ಹಿಂದೆ ಬಾಲಿವುಡ್​ ನಟಿ ರವೀನಾ ಟಂಡನ್​ ವಿಡಿಯೋ ವೈರಲ್​ ಆಗಿತ್ತು. ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ಕೆಲವರು ಹಲ್ಲೆ ಮಾಡಿದ್ದರು. ಆ ಸಂದರ್ಭದ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಡಲಾಗಿತ್ತು. ವೈರಲ್ ವಿಡಿಯೋದಲ್ಲಿ ರವೀನಾ ಟಂಡನ್ ಅವರ ಕಾರು ವ್ಯಕ್ತಿಯ ತಾಯಿಗೆ ಡಿಕ್ಕಿ ಹೊಡೆದಿದೆ ಮತ್ತು ನಟಿ ಮೇಲೆ ಹಲ್ಲೆ ನಡೆಸಲಾಗಿತ್ತು. ಆದರೆ, ಮುಂಬೈ ಪೊಲೀಸರ ತನಿಖೆಯಿಂದ ನಟಿ ಕಾರು ಯಾರಿಗೂ ಡಿಕ್ಕಿಯಾಗಿಲ್ಲ ಎಂದು ದೃಢಪಟ್ಟಿದೆ.

ರವೀನಾ ಟಂಡನ್​ ಅವರ ವಿಡಿಯೋವನ್ನು ಪೋಸ್ಟ್​ ಮಾಡಿದ್ದಕ್ಕೆ ಆ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುತ್ತಿರಲಿಲ್ಲ. ಆದರೆ ಆ ವಿಡಿಯೋದ ಜೊತೆ ನೀಡಿದ ಕ್ಯಾಪ್ಷನ್​ನಿಂದ ನಟಿಗೆ ಸಿಟ್ಟು ಬಂದಿದೆ. ರವೀನಾ ಟಂಡನ್​ ಅವರು ಮದ್ಯಪಾನ ಮಾಡಿದ್ದಾರೆ, ರ‍್ಯಾಶ್​ ಡ್ರೈವಿಂಗ್​ ಮಾಡಿದ್ದಾರೆ ಹಾಗೂ ಜನರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕ್ಯಾಪ್ಷನ್​ನಲ್ಲಿ ಆರೋಪಿಸಲಾಗಿತ್ತು ರವೀನಾ ಟಂಡನ್​ ಮೇಲೆ ಕೇಳಿಬಂದ ಈ ಆರೋಪಗಳೆಲ್ಲ ಸುಳ್ಳು ಎಂದು ನಂತರದಲ್ಲಿ ಪೊಲೀಸರು ಹೇಳಿಕೆ ನೀಡಿದರು. ಆ ಬಳಿಕ ವೈರಲ್​ ವಿಡಿಯೋವನ್ನು ಡಿಲೀಟ್​ ಮಾಡುವಂತೆ ಆ ವ್ಯಕ್ತಿಗೆ ಮನವಿ ಮಾಡಿಕೊಳ್ಳಲಾಯಿತು. ಆದರೆ ವಿಡಿಯೋ ಡಿಲೀಟ್​ ಮಾಡಲು ಆತ ಒಪ್ಪಿಲ್ಲ. ಆದ್ದರಿಂದ ಕಾನೂನಿನ ಮೂಲಕ ಬುದ್ಧಿ ಕಲಿಸಲು ರವೀನಾ ಟಂಡನ್​ ಮುಂದಾಗಿದ್ದಾರೆ .

ವಿಡಿಯೋ ಹಂಚಿಕೊಂಡ ವ್ಯಕ್ತಿಯ ವಿರುದ್ಧ ಮಾನನಷ್ಟ ಕೇಸ್​ ಹಾಕಲಾಗಿದೆ. ರವೀನಾ ಟಂಡನ್ ಅವರ ವಕೀಲರಾದ ಸನಾ ರಯೀಸ್ ಖಾನ್ ಅವರ ಮೂಲಕ ಕಳುಹಿಸಲಾದ ಮಾನನಷ್ಟ ನೋಟಿಸ್, ಪೊಲೀಸರು ಬಹಿರಂಗಪಡಿಸಿದ ಸರಿಯಾದ ಸಂಗತಿಗಳನ್ನು ನಟಿಗೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.