Open Challenge : ಬಿ.ವೈ.ವಿಜಯೇಂದ್ರ ಮತ್ತೊಬ್ಬರ ಭಿಕ್ಷೆ ಮೇಲೆ ಆರಿಸಿ ಬಂದವ. ಅತನಿಗೆ ಧಮ್ಮು, ತಾಕತ್ತು ಇದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಲಿ ನೋಡೋಣ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜತೆ ಭಾನುವಾರ ಮಾತನಾಡಿದರು. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಲು ಸಿದ್ಧ. ನಾನು ಕೇವಲ ಹಿಂದೂತ್ವದ ಆಧಾರದ ಮೇಲೆ ಚುನಾವಣೆಯಲ್ಲಿ ಗೆಲ್ಲುತ್ತೇನೆ. ನನಗೆ ಮುಸ್ಲಿಮರ ವೋಟ್ ಬೇಡ. ವಿಜಯೇಂದ್ರ ನಿನಗೆ ತಾಕತ್ ಇದ್ಯಾ, ಚುನಾವಣೆಗೆ ರೆಡಿಯಿದ್ದೇನೆ. ಹಂದಿ ಕಡೆಯಿಂದ ನನ್ನ ವಿರುದ್ಧ ಮಾತನಾಡಿಸಬೇಡ ಎಂದು ಪರೋಕ್ಷವಾಗಿ ರೇಣುಕಾಚಾರ್ಯಗೆ ಯತ್ನಾಳ್ ತಿವಿದರು.
ಎಲ್ಲಿಯವರೆಗೆ ಒಂದು ಕುಟುಂಬದಿಂದ ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ. ಯಡಿಯೂರಪ್ಪ ಕುಟುಂಬದಿಂದ ಮುಕ್ತವಾದ ಮೇಲೆ ನಾನು ಬಿಜೆಪಿಗೆ ಹೋಗುತ್ತೀನಿ. ಒಂದು ದಿನ ಎಲ್ಲರೂ ಹೋಗಲೇಬೇಕು. ಯಾವುದು ಶಾಶ್ವತವಲ್ಲ. ನಾನು ಒಳ್ಳೆಯವನು. ದುಷ್ಟರಿಗೆ ನಾನು ದುಷ್ಟ ಎಂದರು.