ಕೋಲಾರ: ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿಯಲ್ಲಿ ರೈತರಿಂದ ರಾಗಿ/ಭತ್ತ ಖರೀದಿ ಪ್ರಕ್ರಿಯೆಗೆ ಡಿ.15ರಿಂದ ನೋಂದಣಿ ಆರಂಭಿಸಲಾಗುವುದು. ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿಂದ ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ರಾಜಾ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಬುಧವಾರ ಆಯೋಜಸಿದ್ದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ಕ್ವಿಂಟಾಲ್ ರಾಗಿಗೆ 3578 ರೂ.ಗಳನ್ನು ಮತ್ತು ಭತ್ತ ಸಾಮಾನ್ಯ 2040 ರೂ.ಗಳನ್ನು ಭತ್ತ ಗ್ರೇಡ್&ಎ 2060 ರೂ.ಗಳನ್ನು ಸರ್ಕಾರ ದರ ನಿಗದಿಪಡಿಸಿದೆ ಎಂದರು.
ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್ನಂತೆ ಗರಿಷ್ಟ 20 ಕ್ವಿಂಟಾಲ್ ವರೆಗೆ ರಾಗಿಯನ್ನು ಖರೀದಿಸಲಾಗುತ್ತದೆ. ಆದೇ ರೀತಿ ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಯ ಅನುಗುಣವಾಗಿ ಪ್ರತಿ ಎಕರೆಗೆ 25 ಕ್ವಿಂಟಾಲ್ನಂತೆ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಖರೀದಿಸಲಾಗುವುದು. ರೈತರು ಕೃಷಿ ಇಲಾಖೆಯಿಂದ ಈಗಾಗಲೇ ನೀಡಿರುವ ಫೂಟ್ಸ್ ಐಡಿಯನ್ನು ಖರೀದಿ ಕೇಂದ್ರಗಳಿಗೆ ತಂದು ನೋಂದಾಯಿಸಿಕೊಂಡು ತಾವು ಬೆಳೆದ ರಾಗಿ ಮತ್ತು ಭತ್ತವನ್ನು ಮಾರಾಟ ಮಾಡಬಹುದು ಎಂದರು.
ರೈತರು ನೋಂದಣಿ ಮಾಡಿಸಿಕೊಂಡ ಬಳಿಕ ರಾಗಿ ಮತ್ತು ಭತ್ತ ಖರೀದಿ ಕೇಂದ್ರಕ್ಕೆ ತಂದು ಕೃಷಿ ಇಲಾಖೆಯಿಂದ ನೇಮಿಸಿದ ಗ್ರೇಡರ್ಗಳಿಂದ ಪರೀಸಿ, ಗುಣಮಟ್ಟದ ಪ್ರಮಾಣ ಪತ್ರವನ್ನು ಪಡೆದು ರಾಗಿ ಮತ್ತು ಭತ್ತವನ್ನು ಮಾರ್ಚ್ 31 ರವರೆಗೂ ಖರೀದಿಸಲಾಗುವುದು. ಅನಂತರ ಆನ್ಲೈನ್ ಮೂಲಕ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದರು.
ಖರೀದಿ ಕೇಂದ್ರಗಳು:
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಕಚೇರಿ ದೂ. 08152&222614, ಜಿಲ್ಲಾ ವ್ಯವಸ್ಥಾಪಕರ ಮೊ.ಸಂಖ್ಯೆ 9448496027 ಸಂಪರ್ಕಿಸಬಹುದು. ಕಚೇರಿ ವ್ಯವಸ್ಥಾಪಕ ಎಚ್.ಸಿ. ಶ್ರೀಕಾಂತ್, ಕಿರಿಯ ಸಹಾಯಕ ಎಸ್.ಎನ್.ರಮೇಶ್, ಆಹಾರ ಇಲಾಖೆ ವ್ಯವಸ್ಥಾಪಕ ಸುಬ್ರಮಣ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.