ನ್ಯೂಸ್

ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ಅಲಂಕರಿಸಿದ ರಿಯಾ ಸಿಂಘಾ​​

 ನವದೆಹಲಿ:   ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ರಿಯಾ ಸಿಂಘಾ ಗೆದ್ದಿದ್ದಾರೆ.  ಈ ಕುರಿತಾದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್​​ ಮೀಡಿಯಾದಲ್ಲಿ ಸಖತ್​ ವೈರಲ್​​ ಆಗುತ್ತಿದೆ.

ರಾಜಸ್ಥಾನದ ಜೈಪುರದಲ್ಲಿ ನಡೆದ ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆಯಲ್ಲಿ ರಿಯಾ ಗೆದ್ದು ಪ್ರತಿಷ್ಠಿತ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು. ಇದರೊಂದಿಗೆ ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶವನ್ನು ರಿಯಾ ಪಡೆದುಕೊಂಡಿದ್ದಾರೆ. ಕಿರೀಟವನ್ನು ಸ್ವೀಕರಿಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

ಮಿಸ್ ಯೂನಿವರ್ಸ್ ಇಂಡಿಯಾ 2024  ರಿಯಾ ಸಿಂಘಾ ಮಾತನಾಡಿ,  ಮಿಸ್ ಯೂನಿವರ್ಸಿಟಿ ಇಂಡಿಯಾ ಪಟ್ಟ ಗೆದ್ದಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ . ಈ ಮಟ್ಟಕ್ಕೆ ಬರಲು ಶ್ರಮಿಸಿದ್ದೇನೆ ಮತ್ತು ಇಲ್ಲಿಯವರೆಗೆ ಗೆದ್ದವರಿಂದ ಸಾಕಷ್ಟು ಕಲಿತಿದ್ದೇನೆ ಎಂದು ರಿಯಾ ಹೇಳಿದ್ದಾರೆ.

ನಟಿ ಮತ್ತು ಮಿಸ್ ಯೂನಿವರ್ಸ್ ಇಂಡಿಯಾ 2015 ರ ಉರ್ವಿ ರೌಟೇಲಾ ಈ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ಈ ವರ್ಷ ಮತ್ತೊಮ್ಮೆ ವಿಶ್ವ ಸುಂದರಿ ಕಿರೀಟವನ್ನು ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಎಲ್ಲ ಹುಡುಗಿಯರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದಾರೆ ಮತ್ತು ಅವರ ಸಮರ್ಪಣೆ ಅದ್ಭುತವಾಗಿದೆ ಎಂದು ರೌಟೇಲಾ ಶ್ಲಾಘಿಸಿದರು.