Delhi CM:ದೆಹಲಿ ಮುಖ್ಯಂತ್ರಿ ಹುದ್ದೆಗೆ ಶಾಸಕಿ ರೇಖಾಗುಪ್ತ ಅವರ ಹೆಸರನ್ನ ಅಂತಿಮಗೊಳಿಸಲಾಗಿದ್ದು, ನಾಳೆ(ಫೆ.20) ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಬುಧವಾರ ವರದಿಯಾಗಿದೆ.
ಇನ್ನು ಮೂಲಗಳ ಪ್ರಕಾರ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ರೇಖಾಗುಪ್ತ ಅವರ ಹೆಸರನ್ನು ಸೂಚಿಸಲಾಗಿದ್ದು, ಇದಕ್ಕೆ ಬಿಜೆಪಿ ಕೂಡ ಒಪ್ಪಿದೆ. ವಿಧಾನಸಭಾ ಚುನಾವಣೆಯ ಫಲಿತಾಂಶದ 11 ದಿನಗಳ ಬಳಿಕ ಇಂದು(ಫೆ.19) ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಹೆಸರು ಘೋಷಿಸುವ ನಿರೀಕ್ಷೆ ಇದೆ.
ಮುಖ್ಯಮಂತ್ರಿಯವರ ಪ್ರಮಾಣ ವಚನ ಸ್ವೀಕಾರ ಗುರುವಾರ (ಫೆ.20) ಮಧ್ಯಾಹ್ನ 12:35 ಕ್ಕೆ ರಾಮಲೀಲಾ ಮೈದಾನದಲ್ಲಿ ನಡೆಯಲಿದೆ. ದೆಹಲಿಯ ಮುಖ್ಯ ಕಾರ್ಯದರ್ಶಿ ಕಳುಹಿಸಿರುವ ಆಹ್ವಾನ ಪತ್ರಿಕೆಯಲ್ಲಿ, ಮುಖ್ಯಮಂತ್ರಿಯೊಂದಿಗೆ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಉಲ್ಲೇಖವೂ ಇದೆ ಎಂದು ವರದಿಗಳು ಉಲ್ಲೇಖಿಸಿವೆ. ಈ ಕಾರ್ಯಕ್ರಮದಲ್ಲಿ 30 ಸಾವಿರ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ.
ರೇಖಾ ಗುಪ್ತಾ ವ್ಯಾಪಕ ಸಾರ್ವಜನಿಕ ಸೇವಾ ಅನುಭವ ಹೊಂದಿದ್ದು, ಈ ಹಿಂದೆ ಕೌನ್ಸಿಲರ್ ಕೂಡ ಆಗಿದ್ದರು. ರೇಖಾ ಅವರು ಶಾಲಿಮಾರ್ ಬಾಗ್‌ನಲ್ಲಿ ಎಎಪಿಯ ವಂದನಾ ಕುಮಾರಿಯನ್ನು ಸೋಲಿಸಿದ್ದರು.(ಏಜೆನ್ಸೀಸ್)