ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ 
ನ್ಯೂಸ್

ಪುಣ್ಯಕೋಟಿ ದತ್ತು ಯೋಜನೆಗೆ ತಕ್ಷಣ ಅನುದಾನ ಬಿಡುಗಡೆ ಮಾಡಿ: ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯ- Release funds for the Punyakoti

ಗೋವುಗಳ ರಕ್ಷಣೆ ಮತ್ತು ಪೋಷಣೆಗಾಗಿ ರೂಪಿಸಿದ ಪುಣ್ಯಕೋಟಿ ದತ್ತು ಯೋಜನೆಗೆ ತಕ್ಷಣ ಅನುದಾನ ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಸರ್ಕಾರವನ್ನು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಬೆಂಗಳೂರು: (Release funds for the Punyakoti adoption scheme) ಗೋವುಗಳ ರಕ್ಷಣೆ ಮತ್ತು ಪೋಷಣೆಗಾಗಿ ರೂಪಿಸಿದ ಪುಣ್ಯಕೋಟಿ ದತ್ತು ಯೋಜನೆಗೆ ತಕ್ಷಣ ಅನುದಾನ ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಸರ್ಕಾರವನ್ನು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

‘ಎಕ್ಸ್’ನಲ್ಲಿ ವಿಜಯವಾಣಿ ವಿಶೇಷ ವರದಿ ಪ್ರಕಟಿಸಿ, ಡಿ.ಕೆ.ಶಿವಕುಮಾರ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಒಂದೆಡೆ ಬರದ ಹೊಡೆತಕ್ಕೆ ಮೇವು ಸಿಗದೆ ಜಾನುವಾರುಗಳು ಕಂಗಾಲಾಗಿವೆ, ಮತ್ತೊಂದೆಡೆ ಪುಣ್ಯಕೋಟಿ ದತ್ತು ಯೋಜನೆಗೆ ಸಮರ್ಪಕವಾಗಿ ಅನುದಾನ ನೀಡದೆ ಯೋಜನೆಯನ್ನು ಸೊರಗುವಂತೆ ಮಾಡಲಾಗಿದೆ. ಸಿಎಂ ಡಿ.ಕೆ.ಶಿವಕುಮಾರ್, ತಕ್ಷಣ ಅನುದಾನ ಬಿಡುಗಡೆ ಮಾಡುವ ಮೂಲಕ ಗೋಶಾಲೆಗಳ ನೆರವಿಗೆ ಧಾವಿಸಬೇಕು. ಮೂಕಪ್ರಾಣಿಗಳ ಹಸಿವು ಮತ್ತು ಗೋಶಾಲೆಗಳ ಸಂಕಷ್ಟದ ಬಗ್ಗೆ ಇನ್ನಾದರೂ ಸರ್ಕಾರ ನಿರ್ಲಕ್ಷ್ಯ ವಹಿಸದೆ ಕ್ರಮ ಕೈಗೊಳ್ಳಬೇಕು ಎಂದರು.

2 ವರ್ಷಗಳಿಂದ ಪ್ರೋತ್ಸಾಹ ಧನ ಬಿಡುಗಡೆಯಾಗದೆ ಖಾಸಗಿ ಗೋಶಾಲೆಗಳು ಸಂಕಷ್ಟಕ್ಕೆ ಸಿಲುಕಿವೆ, ಸಾವಿರಾರು ಜಾನುವಾರುಗಳ ಪಾಲನೆಗೆ ದಾನಿಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮೇವು, ನಿರ್ವಹಣೆ ಮತ್ತು ಪಶುವೈದ್ಯಕೀಯ ವೆಚ್ಚಗಳ ನಡುವೆ ನಿಗದಿತ ಅನುದಾನವೂ ಸಾಲುತ್ತಿಲ್ಲ. ಗೋವುಗಳ ರಕ್ಷಣೆ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್ ಸರ್ಕಾರಕ್ಕೆ, ಅವುಗಳ ಹಸಿವು ನೀಗಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಲು ಏಕೆ ಸಾಧ್ಯವಾಗುತ್ತಿಲ್ಲ? ಎಂದು ಪ್ರಶ್ನಿಸಿದ ಆರ್.ಅಶೋಕ್, ಇದು ಬರದ ಸಂಕಷ್ಟದ ಜತೆಗೆ ಸರ್ಕಾರದ ಆಡಳಿತ ವೈಫಲ್ಯವನ್ನೂ ಎತ್ತಿತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.